19 ಕಿ.ಮೀ. ದೂರ 8.5 ನಿಮಿಷದಲ್ಲಿ ಓಡಿಸಿ, ಆಪದ್ಭಾಂಧವನಾದ ಚಾಲಕ
Team Udayavani, Sep 6, 2021, 1:24 AM IST
ಸಾಂದರ್ಭಿಕ ಚಿತ್ರ
ವಿಟ್ಲ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ.
ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದು, ಆ್ಯಂಬುಲೆನ್ಸ್ಗಾಗಿ ಸಂಬಂಧಪಟ್ಟ ವರು ಕರೆ ಮಾಡುತ್ತಿದ್ದಾಗ, ವಿಕೇಶ್ ಶೆಟ್ಟಿ ಅವರ ಗಮನಕ್ಕೆ ವಿಷಯ ಬಂದಿತು. ಈ ಸಂದರ್ಭ ತನ್ನ ಸ್ವಿಫ್ಟ್ ಕಾರನ್ನು ತೆಗೆದುಕೊಂಡು ಯುವತಿ ಹಾಗೂ ಅವರ ಸಂಬಂಧಿ ಕರನ್ನು ಕರೆದುಕೊಂಡು ರಾತ್ರಿ ಸುಮಾರು 8.30ರ ವೇಳೆಗೆ ಬುಡೋಳಿಯಿಂದ ಮಾಣಿಗೆ ಬಂದು ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ತಲುಪಿಸಿದ್ದಾಗಿ ವಿಕೇಶ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.