ಮೂಲ ಸೌಕರ್ಯ ಕಲ್ಪಿಸದ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ

ಬಸವನಪಾದೆ-ಮುಳ್ಯ ರಸ್ತೆ ಅಭಿವೃದ್ಧಿ ನನೆಗುದಿಗೆ

Team Udayavani, Oct 31, 2020, 4:10 AM IST

An outrage against people who don’t have the basic infrastructure

ಅಜ್ಜಾವರ : ಊರಿನ ರಸ್ತೆ ಅಭಿವೃದ್ಧಿಗಾಗಿ ಹಲವು ವರ್ಷಗಳಿಂದ ಬೇಡಿಕೆಯಿಟ್ಟಿದ್ದರೂ ಭರವಸೆ ಈಡೇರದೆ ಇರುವುದರಿಂದ ಪಂ. ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳನ್ನು ಬೆಂಬಲಿಸಲು ಮುಳ್ಯ ನಿವಾಸಿಗಳು ನಿರ್ಧರಿಸಿದ್ದಾರೆ. ಜನಪ್ರತಿನಿಧಿಗಳ ಜಾಣ ಮೌನಕ್ಕೆ ಪಕ್ಷೇತರ ಅಭ್ಯರ್ಥಿಗೆ ಮತಹಾಕುವ ಮೂಲಕ ತಿರುಗೇಟು ನೀಡಲು ತೀರ್ಮಾನಿಸಿದ್ದಾರೆ.

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮ ವ್ಯಾಪ್ತಿಯ ಬಸವನಪಾದೆ- ಮುಳ್ಯ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ಭಾಗದಲ್ಲಿ ಸುಮಾರು 250 ರಿಂದ 300 ಮನೆಗಳಿವೆ. ಹೆಚ್ಚು ಕಡಿಮೆ 2,000 ಜನಸಂಖ್ಯೆ ಹೊಂದಿದ್ದು, ದಿನನಿತ್ಯ ವಾಹನಗಳ ಸಂಚಾರ ಅಧಿಕವಾಗಿದ್ದರೂ, ಯೋಗ್ಯ ರಸ್ತೆ ಮಾತ್ರ ನಿರ್ಮಾಣವಾಗಿಲ್ಲ.

ಹೊಂಡ-ಗುಂಡಿಗಳ ರಸ್ತೆ
ಸುಮಾರು 5 ಕಿ.ಮೀ. ಉದ್ದವಿರುವ ಮುಳ್ಯ ರಸ್ತೆ ನಿರ್ಮಾಣವಾಗಿ ಕೆಲವು ವರ್ಷಗಳೇ ಸಂದಿವೆ. ಇದೇ ರಸ್ತೆಗೆ 150 ಮೀ. ಕಾಂಕ್ರೀಟ್‌ ಕಾಮಗಾರಿ, ಅನಿಯಡ್ಕ ಭಾಗದಲ್ಲಿ ಹದಗೆಟ್ಟ ರಸ್ತೆಗೆ ಕೆಲವು ಕಡೆ ಪ್ಯಾಚ್‌ ವರ್ಕ್‌ ಮಾಡಲಾಗಿದೆ. ಉಳಿದಂತೆ ಬಸವನಪಾದೆಯಿಂದ ಮುಳ್ಯ ಭಜನ ಮಂದಿರದವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು, ದಾರಿಯುದ್ದಕ್ಕೂ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ರಸ್ತೆ ದುರಸ್ತಿ ಮಾಡದೇ ಇರುವುದು ರಸ್ತೆ ಇಷ್ಟು ಪ್ರಮಾಣದಲ್ಲಿ ಹದಗೆಡಲು ಕಾರಣ ಎಂಬುದು ಗ್ರಾಮಸ್ಥರ ಆರೋಪ.

ಗ್ರಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ
ಬಸವನಪಾದೆ- ಮುಳ್ಯ ರಸ್ತೆ ಅಭಿವೃದ್ಧಿ ಗೊಳಿಸಬೇಕೆಂಬ ಒತ್ತಾಯ ಕೆಲವು ವರ್ಷಗಳಿಂದಲೇ ಕೇಳಿ ಬಂದಿತ್ತು. ಕಳೆದ ಲೋಕಸಭೆ ಹಾಗೂ ವಿಧಾನಸಭೆ ಚುನಾ ವಣೆ ಸಂದರ್ಭದಲ್ಲಿ ಕೂಡ ಈ ವಿಷಯ ಮಹತ್ವ ಪಡೆದುಕೊಂಡಿತ್ತು. ಪ್ರಬಲ ಬೇಡಿಕೆಯಿಟ್ಟಿದ್ದರೂ ಭರವಸೆ ಮಾತ್ರ ಈಡೇರಿಲ್ಲ. ಈ ಭಾಗದ ಗ್ರಾಮಸ್ಥರೆಲ್ಲ ಸಭೆ ಸೇರಿ ಮತದಾನ ಬಹಿಷ್ಕಾರಕ್ಕೂ ಮುಂದಾಗಿದ್ದರು. ಇದೀಗ ಗ್ರಾ.ಪಂ. ಚುನಾವಣೆ ಸಮೀಪಿಸುತ್ತಿದ್ದಂತೆ, ಮತ್ತೆ ಈ ವಿಷಯ ಮಹತ್ವ ಪಡೆದುಕೊಂಡಿದೆ. ಗ್ರಾಮದ ಪ್ರಮುಖರು ಮತ್ತೆ ಸಭೆ ಸೇರಿ ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಾರಿ ಹೊಸ ನಿರ್ಣಯ ತೆಗೆದುಕೊಂಡಿದ್ದಾರೆ. ಯಾವುದೇ ಪಕ್ಷವನ್ನು ಬೆಂಬಲಿಸದೆ ಸ್ವತಂತ್ರ ಅಭ್ಯರ್ಥಿಯನ್ನು ಕಣಕ್ಕಿಸುವ ಮೂಲಕ ರಸ್ತೆ ಅಭಿವೃದ್ಧಿಗೆ ಹೋರಾಟ ನಡೆಸುವ ಬಗ್ಗೆ ತೀರ್ಮಾನಿಸಲಾಗಿದೆ.

ಬ್ಯಾನರ್‌ ಅಳವಡಿಕೆ
ರಸ್ತೆ ದುರಸ್ತಿಗೊಂಡು ಸಂಚಾರಕ್ಕೆ ಯೋಗ್ಯ ವಾಗಿಸಲು ಪಣತೊಟ್ಟಿರುವ ಗ್ರಾಮಸ್ಥರು, ಬ್ಯಾನರ್‌ಗಳ ಮೂಲಕ ಅರಿವು ಮೂಡಿಸುತ್ತಿದ್ದಾರೆ.

“ಮತದಾನ ಚಲಾಯಿಸುವಾಗ ಪಕ್ಷಗಳ ಕಟ್ಟು ಪಾಡುಗಳಿಲ್ಲದೆ ಪಕ್ಷೇತರ ಅಭ್ಯರ್ಥಿಯನ್ನು ಗೆಲ್ಲಿಸೋಣ’ ಎಂಬ ಅರ್ಥದ ಬರಹದೊಂದಿಗೆ ಮುಳ್ಯ ಪರಿಸರದ ಹಲವು ಕಡೆಗಳಲ್ಲಿ ಚುನಾ ವಣೆ ಕುರಿತಾದ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಇನ್ನೊಂದೆಡೆ ಬಿಜೆಪಿ ವತಿಯಿಂದ ಮುಳ್ಯ ವಾರ್ಡ್‌ನಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ನೀಡಲಾಗಿದೆ.

ಸರಕಾರಿ ಬಸ್‌ ಸಂಚಾರಕ್ಕೆ ಆಗ್ರಹ
ಮುಳ್ಯದಿಂದ ಸುಳ್ಯಕ್ಕೆ ಸಂಚರಿಸಲು ಯಾವುದೇ ಬಸ್‌ಗಳಿಲ್ಲ. ಕೆಲವು ವರ್ಷಗಳ ಹಿಂದೆ ಸುಳ್ಯ-ಮುಳ್ಯ-ಅಟೂರು ಮಾರ್ಗವಾಗಿ ಖಾಸಗಿ ಬಸ್ಸೊಂದು ಓಡಾಡಲು ಪ್ರಾರಂಭಿಸಿದ್ದರೂ ಒಂದೇ ತಿಂಗಳಲ್ಲಿ ಸ್ಥಗಿತಗೊಂಡಿತ್ತು. ಹೀಗಾಗಿ ಜನರು ಅನಿವಾರ್ಯವಾಗಿ ಆಟೋ, ಜೀಪುಗಳನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ ಪ್ರಯಾಣಿಸಲು ಇದು ಜೇಬಿಗೆ ಕತ್ತರಿಯೂ ಆಗುತ್ತಿದೆ. ಈ ಭಾಗದಲ್ಲಿ ಒಂದಾದರೂ ಸರಕಾರಿ ಬಸ್‌ ಸಂಚಾರಕ್ಕಾಗಿ ಜನರ ಆಗ್ರಹವಿದೆ.

ತಕ್ಕ ಪಾಠ ಕಲಿಸಲಿದ್ದೇವೆ
ಹೊಂಡಗುಂಡಿಯಿಂದ ಕೂಡಿದ ನಮ್ಮ ಕಾಂತಮಂಗಲದ ಬಸವನಪಾದೆ- ಮುಳ್ಯ ರಸ್ತೆಯಲ್ಲಿ ದಿನ ನಿತ್ಯ ಓಡಾಡುವ ಜನರು ಪಡುವಂತಹ ಕಷ್ಟ ಜನಪ್ರತಿನಿಧಿಗಳಿಗೆ ಕಾಣುತ್ತಿಲ್ಲ. ಗ್ರಾ.ಪಂ. ಚುನಾವಣೆ ಮುನ್ನ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಿ. ಇಲ್ಲವೆಂದರೆ ನಿಮ್ಮ ನಿರ್ಲಕ್ಷ್ಯಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ.
-ಸತೀಶ್‌ ಬೂಡುಮಕ್ಕಿ ಅಧ್ಯಕ್ಷರು, ಅಂಬೇಡ್ಕರ್‌ ಸೇವಾ ಸಮಿತಿ ಸುಳ್ಯ ತಾಲೂಕು

ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.