ಅಡಿಕೆ ಉತ್ಪನ್ನಗಳ ತಯಾರಿ ಕಂಪೆನಿಗಳಿಗೆ ಪ್ರೋತ್ಸಾಹ ನೀಡಿ

Team Udayavani, Mar 10, 2023, 6:20 AM IST

ಅಡಿಕೆ ಉತ್ಪನ್ನಗಳ ತಯಾರಿ ಕಂಪೆನಿಗಳಿಗೆ ಪ್ರೋತ್ಸಾಹ ನೀಡಿ

ಪುತ್ತೂರು: ಮಲೆನಾಡು ಅಡಿಕೆ ಬೆಳೆಗಾರರ ಪ್ರಮುಖ ಪ್ರದೇಶ. ಈಚೆಗೆ ವಿಸ್ತಾರಗೊಂಡಿದೆ. ಹೀಗಾಗಿ ಅಡಿಕೆ ಬೆಳೆಯು ಈಗ ಕರ್ನಾಟಕದ ಬಹು ಪಾಲು ಪ್ರದೇಶವನ್ನು ವ್ಯಾಪಿಸಿದೆ. ಇದಕ್ಕೆ ಪ್ರಮುಖ ವಾದ ಕಾರಣ ಅಡಿಕೆ ಮಾರುಕಟ್ಟೆ, ಅಡಿಕೆ ಧಾರಣೆ. ಈಗ ಅಡಿಕೆ ಬೆಳೆಗಾರರೇ ಪ್ರಮುಖವಾಗಿ ಸರಕಾರವನ್ನು ಆಗ್ರಹಿಸಬೇಕಾದ ಕಾಲ ಬಂದಿದೆ.

ಈಚೆಗೆ ಅಡಿಕೆ ಬೆಳೆ ವಿಸ್ತರಣೆ ಹಾಗೂ ಅಡಿಕೆ ಮಾರುಕಟ್ಟೆಯ ಬಗ್ಗೆ ಬೆಳೆಗಾರರಲ್ಲಿ ಆತಂಕ ಇದೆ. ಹೀಗಾಗಿ ಅಡಿಕೆಯ ಬಹು ಉಪಯೋಗಿ ವಸ್ತುಗಳನ್ನು, ಔಷಧಗಳನ್ನು, ಅಡಿಕೆ ಬಣ್ಣವನ್ನು ವಿವಿಧೆಡೆ ಉಪಯೋಗ ಮಾಡಲಾಗುತ್ತಿದೆ. ಇದಕ್ಕಾಗಿ ಸರಕಾರವು ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಅಡಿಕೆ ಉತ್ಪನ್ನಗಳನ್ನು ತಯಾರು ಮಾಡುವ ಕಂಪೆನಿಗಳಿಗೆ, ಸಂಸ್ಥೆಗಳಿಗೆ ಅಥವಾ ನೂತನವಾಗಿ ಉದ್ಯಮ ಆರಂಭ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು ಹಾಗೂ ಉದ್ದಿಮೆಗಳ ಸ್ಥಾಪನೆಗೆ ಹೆಜ್ಜೆ ಇಡಬೇಕು. ಕುಮ್ಕಿ ಜಮೀನು ವರ್ಗದಾರರಿಗೆ ನೀಡುವ ಮಸೂದೆಯನ್ನು ತತ್‌ಕ್ಷಣವೇ  ಜಾರಿ ಮಾಡಬೇಕು. ರೈತರ ಹಕ್ಕಾಗಿರುವ ಕುಮ್ಕಿ ಮತ್ತೆ ರೈತರಿಗೆ ಅಧಿಕೃತವಾಗಿ ಸಿಗಬೇಕು. ಉಳಿದಂತೆ ನಮ್ಮ ಹಕ್ಕೊತ್ತಾಯಗಳು ಹೀಗಿವೆ.

– ಅಡಿಕೆ ಬೆಳೆಯ ಜತೆಗೆ ಇತರ ಬೆಳೆಗಳಿಗೂ ಆದ್ಯತೆ ನೀಡುವ ದೃಷ್ಟಿಯಿಂದ ಉಪಬೆಳೆಗಳಿಗೂ ಸೂಕ್ತ ಮಾರುಕಟ್ಟೆ ಹಾಗೂ ಬೆಳೆಯ ಮಾಹಿತಿಗಳನ್ನು ಇಲಾಖೆಗಳ ಮೂಲಕ ನೀಡುವ ವ್ಯವಸ್ಥೆ ಮಾಡಬೇಕು.

– ಶೂನ್ಯ ಬಡ್ಡಿಯಲ್ಲಿ ಕೃಷಿ ಯಂತ್ರಗಳಿಗೆ ಸಬ್ಸಿಡಿ ಬದಲಾಗಿ ಸಹಕಾರ ಸಂಘಗಳಲ್ಲಿ ಇಎಂಐ ಯೋಜನೆಯನ್ನು ತರಬೇಕು, ಈ ಮೂಲಕ ಕೃಷಿ ಯಂತ್ರೋಪಕರಣವನ್ನು ಕೃಷಿಕರಿಗೆ ಸುಲಭವಾಗಿ ಲಭ್ಯವಾಗುವ ಹಾಗೆ ಮಾಡಬೇಕು. ಆಗ ಸಬ್ಸಿಡಿ ಸೋರಿಕೆ ತಪ್ಪುತ್ತದೆ.

– ಅಡಿಕೆ ಮೌಲ್ಯವರ್ಧನೆಯಾಗಬೇಕು. ಈಗಾಗಲೇ ಅಡಿಕೆಯ ಹಲವು ಉತ್ಪನ್ನಗಳು ಮಾರುಕಟ್ಟೆಗೆ ಬಂದಿವೆ. ಇನ್ನೂ ಹಲವು ಉತ್ಪನ್ನಗಳು ಮಾರುಕಟ್ಟೆಗೆ ಬರಲು ಇದೆ.

– ಸಿಎಫ್‌ಟಿಆರ್‌ಐ ಮೂಲಕ ಪರಿಶೀಲನೆಗೊಂಡು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯಾಗಬೇಕು ಹಾಗೂ ತರಬೇತಿ ಕೇಂದ್ರಗಳು ರಚನೆಯಾಗಬೇಕು.

– ಅಡಿಕೆ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಆಹಾರ ಸಂಸ್ಕರಣ ಘಟಕಗಳನ್ನು ಸ್ಥಾಪಿಸಬೇಕು. ಈ ಮೂಲಕ ಗುಣಮಟ್ಟದ ಉತ್ಪನ್ನಗಳನ್ನು ಮಾಡಬೇಕು. – ಅಡಿಕೆಯ ಜತೆಗೆ ಹಲವು ಇತರ ಬೆಳೆಗಳೂ ಇರುವುದರಿಂದ ಸಂಸ್ಕರಣೆ ಹಾಗೂ ಮೌಲ್ಯವರ್ಧನೆಗೆ ಅವಕಾಶವಾಗುತ್ತದೆ.

– ಸಣ್ಣ ನೀರಾವರಿಗಾಗಿ ಸಣ್ಣ ಹಳ್ಳಗಳಿಗೆ ಕಟ್ಟ ರಚನೆಗೆ ಧನ ಸಹಾಯ ಬೇಕು. ಪ್ರತೀ ಕೃಷಿಕನಿಗೂ ಇದು ನೇರವಾಗಿ ಲಭ್ಯವಾಗುವ ಹಾಗೆ ಮಾಡಬೇಕು.

– ತೆಂಗು, ಬಾಳೆ, ಗೇರು ಬೀಜ, ಹಣ್ಣು, ಹಲಸಿನ ಹಣ್ಣು ಇವುಗಳ ವಿವಿಧ ಉತ್ಪನ್ನಗಳ ಉತ್ಪಾದನ ಘಟಕ ಸ್ಥಾಪಿಸಲು ತರಬೇತಿ, ಸ್ಥಾಪನೆಗೆ ಪ್ರೋತ್ಸಾಹ ನೀಡಬೇಕು. ಪ್ರತೀ ಹಳ್ಳಿಯಲ್ಲಿ ಇಂಥ ಘಟಕಗಳನ್ನು ತೆರೆಯಬೇಕು.

– ಅಡಿಕೆ ಚೊಗರಿನ ಔದ್ಯಮಿಕ ಬಳಕೆಯ ಬಗ್ಗೆ ಸಂಶೋಧನೆ ನಡೆಯಬೇಕು.

– ಕರ್ನಾಟಕ ಸರಕಾರ ತುರ್ತು ಗಮನ ಹರಿಸಿ ಅಡಿಕೆ ಚೊಗರನ್ನು ಬಟ್ಟೆಯ ಬಣ್ಣ, ಗೆದ್ದಲು ನಿರೋಧಕ ಔಷಧ ಮತ್ತು ಪ್ಲೈವುಡ್‌ ಅಂಟಾಗಿ ಅಭಿವೃದ್ಧಿ ಪಡಿಸಲು ಬೇಕಾದ ಸಂಶೋಧನೆ ಮಾಡಬೇಕು.

– ಅಡಿಕೆ ಬೆಳೆಯುವ ಪ್ರದೇಶಗಳಲ್ಲಿಯೇ ಅಡಿಕೆಗೆ ಸಂಬಂಧಿಸಿದ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಬೇಕು. ಈ ಮೂಲಕ ಉದ್ಯೋಗ ಹಾಗೂ ಅಡಿಕೆ ಬಳಕೆಯ ಕಡೆಗೆ ಸರಕಾರವೇ ಆಸಕ್ತಿ ವಹಿಸಬೇಕು.

 ಅಶೋಕ ಕಿನಿಲ, ಅಧ್ಯಕ್ಷರು, ಅಖೀಲ ಭಾರತ ಅಡಿಕೆ ಬೆಳೆಗಾರರ ಸಂಘ

ಟಾಪ್ ನ್ಯೂಸ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.