Aranthodu; 4 ಜಾನುವಾರುಗಳು ಚಿರತೆಗೆ ಬಲಿ
ಅರಂತೋಡಿನಲ್ಲಿ 1 ದನದ ಕರು, 3 ಆಡುಗಳ ಸಾವು
Team Udayavani, Jan 9, 2024, 1:16 AM IST
ಅರಂತೋಡು: ಸುಳ್ಯ ತಾಲೂಕಿನ ಅರಂತೋಡು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿರುವ ಘಟನೆಯೂ ಅಲ್ಲಲ್ಲಿ ವರದಿಯಾಗುತ್ತಿದೆ.
ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಶನಿವಾರ 3 ಆಡುಗಳನ್ನು ಬಲಿ ಪಡೆದಿದ್ದ ಚಿರತೆ ಅದೇ ಮನೆಯ 2 ವರ್ಷದ ಕರುವೊಂದನ್ನು ರವಿವಾರ ಕೊಂದು ಹಾಕಿದೆ.
ಅಡ್ಕಬಳೆಯ ಲೀಲಾವತಿ ಕರುವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದು, ಸಂಜೆಯಾದರೂ ಅದು ಮರಳಿ ಬಾರದ ಕಾರಣ ತೋಟಕ್ಕೆ ಹೋಗಿ ಹುಡುಕಿದಾಗ ಅರ್ಧ ತಿಂದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಚಿರತೆ ದಾಳಿಯಿಂದ ಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ರಾತ್ರಿ ಅವರದ್ದೇ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಆಡುಗಳ ಮೇಲೆ ದಾಳಿ ನಡೆಸಿದ ಚಿರತೆ 1 ಆಡನ್ನು ಭಕ್ಷಿಸಿ, 2 ಆಡುಗಳನ್ನು ಕೊಂದು ಹಾಕಿತ್ತು. ಸುಳ್ಯ ತಾ|ನ ಅರಂತೋಡು, ಮರ್ಕಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು ಜನರು ಓಡಾಡಲು ಭಯಪಡುವಂತಾಗಿದೆ.
ಸಾಕು ಪ್ರಾಣಿಗಳನ್ನು ಬಲಿ ಪಡೆದಿರುವ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.