Puttur: ಬಿರುಕುಬಿಟ್ಟ ಅರಿಯಡ್ಕ ಹಿ.ಪ್ರಾ. ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ
100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ
Team Udayavani, Jul 24, 2023, 2:52 PM IST
ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸ.ಹಿ.ಪ್ರಾ. ಶಾಲಾ ಕಟ್ಟಡದ ಗೋಡೆ ಬಿರುಕು ಬಿಟ್ಟಿದ್ದು ಕುಸಿಯುವ ಭೀತಿಯಲ್ಲಿರುವುದರಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.
ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿ ತನಕದ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ 3-7ನೇ ತರಗತಿ ತನಕ ಕ್ಲಾಸ್‌ಗಳು ನಡೆಯುತ್ತಿದ್ದು, ಅದೇ ಕಟ್ಟಡದ ಗೋಡೆ ಬಿರುಕುಬಿಟ್ಟಿದೆ. ಗೋಡೆ ಬಿರುಕು ಬಿಟ್ಟಿರುವ ಕಾರಣ ಕಟ್ಟಡದ ಮೇಲ್ಛಾವಣಿ, ಪಕ್ಕಾಸುಗಳು ಕುಸಿತಗೊಂಡಿದ್ದು, ಮುರಿದು ಬೀಳುವ ಹಂತದಲ್ಲಿದೆ.
ಜು. 23ರ ಭಾನುವಾರ ಈ ಘಟನೆ ನಡೆದಿದ್ದು, ಇಂದು ತರಗತಿಗೆ ವಿದ್ಯಾರ್ಥಿಗಳು ಬಂದಾಗ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿದರೂ ಅವರಿಗೆ ಅಲ್ಲಿ ಬದಲಿ ವ್ಯವಸ್ಥೆಗೆ ಯಾವುದೇ ತರಗತಿ ಕೋಣೆಗಳು ಇಲ್ಲ. ರಂಗಮಂಟಪದಲ್ಲಿ ವಿದ್ಯಾರ್ಥಿಗಳನ್ನು ಇರಿಸಿ ಪಾಠ ಮಾಡಲಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡ ಶಿಥಿಲಗೊಂಡಿರುವ ಕಾರಣ ಕೆಲವು ಪೋಷಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿರುವುದಾಗಿ ಪೋಷಕರು ಮಾಹಿತಿ ನೀಡಿದ್ದಾರೆ.
ಶಾಸಕರಿಗೆ ತಿಳಿಸಲಾಗಿದೆ: ಎಸ್‌ಡಿಎಂಸಿ
ಕಟ್ಟಡ ಬಿರುಕು ಬಿಟ್ಟಿರುವ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಸದ್ಯ ತರಗತಿ ಕೋಣೆಗಳು ಇಲ್ಲದಿರುವುದರಿಂದ ಒಂದೇ ಹಾಲ್ ಮತ್ತು ರಂಗಮಂಟಪದಲ್ಲಿ ವಿದ್ಯಾರ್ಥಿಗಳನ್ನು ಇರಿಸಿ ಪಾಠ ಮಾಡಲಾಗುತ್ತಿದೆ.
ಘಟನೆಯ ಬಗ್ಗೆ ಶಾಸಕರಿಗೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಇನ್ನುಳಿದ ಹಳೆ ಕಟ್ಟಡವೂ ಶಿಥಿಲಗೊಂಡಿದ್ದು, ಈ ಬಗ್ಗೆ ಈ ಹಿಂದೆಯೇ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ.
ಮೇಲ್ಛಾವಣಿ ದುರಸ್ಥಿಗೆ ಮಾತ್ರ ಅನುದಾನ ನೀಡಲಾಗಿದ್ದು, ಅದರಲ್ಲಿ ಮೇಲ್ಛಾವಣಿ ದುರಸ್ಥಿ ಮಾಡಲಾಗಿದೆ. ಕಟ್ಟಡದ ಗೋಡೆಗಳು ತುಂಬಾ ಹಳೆಯದಾಗಿರುವ ಕಾರಣ ಮಳೆಗೆ ಕುಸಿತವಾಗುತ್ತಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಹನೀಫ್‌ರವರು ಮಾಹಿತಿ ನೀಡಿದ್ದಾರೆ.
ಕಟ್ಟಡ ಬಿರುಕು ಬಿಟ್ಟ ವಿಷಯ ತಿಳಿದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್, ಒಳಮೊಗ್ರು ವಲಯ ಅಧ್ಯಕ್ಷ ಅಶೋಕ್‌ಪೂಜಾರಿ, ರಫೀಕ್ ದರ್ಖಾಸ್, ಮಹಮ್ಮದ್ ಬೊಳ್ಳಾಡಿ ಮೊದಲಾದವರು ಭೇಟಿ ನೀಡಿ ಸಹಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.