SDPI ಮುಖಂಡ ಅಶ್ರಫ್ ಹತ್ಯೆ: 4 ತಾಲೂಕುಗಳಲ್ಲಿ ನಿಷೇಧಾಜ್ಞೆ
Team Udayavani, Jun 21, 2017, 1:14 PM IST
ಬಂಟ್ವಾಳ : ಇಲ್ಲಿನ ಬೆಂಜನಪದವಿನಲ್ಲಿ ಎಸ್‌ಡಿಪಿಐ ಸಂಘಟನೆಯ ಮುಖಂಡ ಕಲಾಯಿ ಅಶ್ರಫ್ರನ್ನು ಬುಧವಾರ ದುಷ್ಕರ್ಮಿಗಳು ಮಾರಕಾಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಹತ್ಯೆಯ ಬಳಿಕ ಕೋಮು ಸೂಕ್ಷ್ಮ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಕಲ್ಲಡ್ಕ ಗಲಭೆಯ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು,ನಿಷೇಧಾಜ್ಞೆಯ ನಡುವೆಯೂ ನಡೆದ
ಹತ್ಯೆಯ ಬಳಿಕ ಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ.ಸ್ಥಳಕ್ಕೆ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಹತ್ಯೆಗೀಡಾದ ಅಶ್ರಫ್ (30)ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿಯಾಗಿದ್ದು. ಪೂರ್ವ ದ್ವೇಷದಿಂದಲೆ ಕೊಲೆ ನಡೆಸಿರುವ ಶಂಕೆ ವ್ಯಕ್ತಪಡಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಿಗ್ಗೆ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿ,ಕಲಾಯಿ ರಸ್ತೆಯಲ್ಲಿ ಹೊಂಡಗಳಿದ್ದು ನೀರು ತುಂಬಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು,ಅದನ್ನು ಆಶ್ರಫ್ ರವರ ನೇತೃತ್ವದಲ್ಲಿ ಗುಂಡಿಗಳಿಗೆ ಕಲ್ಲುಗಳನ್ನು ಹಾಕಿ ಸರಿಪಡಿಸಿ ಜನಸಾಮಾನ್ಯರಿಗೆ ಉಪಕಾರವಾಗುವ ಸಾಮಾಜ ಸೇವೆಯನ್ನು ಮಾಡಿ ಅಟೋ ರಿಕ್ಷಾದ ಮೂಲಕ ತೆರಳಿದ್ದ ವೇಳೆ ಬಾಡಿಗೆಯ ನೆಪವೊಡ್ಡಿ ಕರೆದುಕೊಂಡು ಹೋದ ದುಷ್ಕರ್ಮಿಗಳು ಬೆಂಜನಪದವಿನಲ್ಲಿ ತಲವಾರು ದಾಳಿ ನಡೆಸಿ ಭೀಕರವಾಗಿ ಹತೈಗೈದಿದ್ದಾರೆ.
4 ತಾಲೂಕುಗಳಲ್ಲಿ ನಿಷೇದಾಜ್ಞೆ
ಬೆಂಜನಪದವು ಅಶ್ರಫ್ ಕೊಲೆ ಪ್ರಕರಣ ಉದ್ವಿಗ್ನಗೊಡಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ತಾಲೂಕಿನಲ್ಲಿ ಸೆಕ್ಷನ್ 144ರ ಅನ್ವಯ ನಿಷೇದಾಜ್ಞೆಯನ್ನು ಜೂನ್ 27ರವರೆಗೆ ವಿಸ್ತರಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.