ಸಮಸ್ಯೆ ಇತ್ಯರ್ಥಕ್ಕೆ ಸರಕಾರದೊಂದಿಗೆ ಮಾತುಕತೆಗೆ ಯತ್ನ: ಸುಬ್ರಹ್ಮಣ್ಯ ಶ್ರೀ

ಕಿದು ಸಂಶೋಧನ ಕೇಂದ್ರ ಉಳಿಸಿ: ಸ್ವಾಮೀಜಿಗೆ ಮನವಿ

Team Udayavani, Jun 29, 2019, 5:00 AM IST

4

ಸುಬ್ರಹ್ಮಣ್ಯ: ಕಿದುವಿನ ಕೇಂದ್ರಿಯ ತೋಟಗಳ ಬೆಳೆಗಳ ಸಂಶೋಧನ ಕೇಂದ್ರವನ್ನು ಅರಣ್ಯ ಇಲಾಖೆ ವಾಪಸ್‌ ಪಡೆಯದೆ ವಿನಾಯಿತಿ ನೀಡುವಂತೆ ಮತ್ತು ನವೀಕರಣ ಸಮಸ್ಯೆ ಇತ್ಯರ್ಥ ಪಡಿಸಿ ಸಂಶೋಧನ ಕೇಂದ್ರವನ್ನು ಉಳಿಸಿಕೊಳ್ಳುವಂತೆ ಉಭಯ ಸರಕಾರಗಳಿಗೆ ಮನವಿ ಮಾಡಲಾಗುವುದು ಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಗಳು ಹೇಳಿದರು.

ಅರಣ್ಯ ಇಲಾಖೆಯಿಂದ ಭೂಮಿಯನ್ನು ಲೀಸ್‌ಗೆ ಪಡೆದು ಕಾರ್ಯಾಚರಿಸುತ್ತಿದ್ದ ಕೃಷಿ ಸಂಶೋಧನ ಕೇಂದ್ರದ ಭೂಮಿಯನ್ನು ನವೀಕರಿಸದ ಕಾರಣ ಕೈ ತಪ್ಪುವ ಭೀತಿ ಉಂಟಾದ ಹಿನ್ನೆಲೆಯಲ್ಲಿ ಸಹಕಾರಿ ಧುರೀಣ ಬಾಲಕೃಷ್ಣ ವಾಲ್ತಾಜೆ ಮತ್ತಿತರ ಕೃಷಿಕರ ನಿಯೋಗ ಶುಕ್ರವಾರ ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿಯಾಗಿ ಮಧ್ಯ ಪ್ರವೇಶಿಸುವಂತೆ ಮನವಿ ಸಲ್ಲಿಸಿದೆ.

ಸಚಿವರೊಂದಿಗೆ ಮಾತುಕತೆ
ಮನವಿ ಸ್ವೀಕರಿಸಿ ಮಾಹಿತಿ ಪಡೆದ ಶ್ರೀಗಳು, ಈ ಹಿಂದೆ ಇಂತಹದ್ದೆ ಸಮಸ್ಯೆ ಬಂದಿದ್ದಾಗ ತಾನು ಕೇಂದ್ರ ಹಾಗೂ ರಾಜ್ಯದ ಸಚಿವರಿಗೆ, ಸಂಸದರಿಗೆ ಮನವಿ ಮಾಡಿದ್ದೆ ಎಂದು ಹೇಳಿದರಲ್ಲದೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಕಿದು ಕೇಂದ್ರದ ಸಮಸ್ಯೆ ಇತ್ಯರ್ಥಪಡಿಸಿ ಶಾಶ್ವತ ಪರಿಹಾರ ಕ್ರಮಕ್ಕೆ ಸರಕಾರವೇ ಮುತುವರ್ಜಿ ವಹಿಸಿ ರೈತರ ಹಿತ ಕಾಯುವಂತೆ ಶ್ರೀಗಳು ಈ ವೇಳೆ ಮನವಿ ಮಾಡಿದರು.

ತನ್ನ ಮನವಿಗೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ ಎಂದು ಶ್ರೀಗಳು ಹೇಳಿದ್ದಾರೆ.

ಮುಖ್ಯಮಂತ್ರಿಯನ್ನು ಭೇಟಿಯಾಗುವೆ
ಜಿನ್‌ ಬ್ಯಾಂಕು ಸಮಸ್ಯೆ ಇತ್ಯರ್ಥಕ್ಕೆ ಕೇಂದ್ರ ಸರಕಾರದ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳನ್ನು ನೇರವಾಗಿ ಭೇಟಿಯಾಗಿ ಚರ್ಚಿಸುವೆ. ಇಲ್ಲಿನ ಅಂತಾರಾಷ್ಟ್ರೀಯ ಸಂಶೋಧನ ಕೇಂದ್ರದಿಂದ ದೇಶದ ಕೃಷಿಕರಿಗೆ ಬಹಳಷ್ಟು ಪ್ರಯೋಜನಕಾರಿ. ಕೃಷಿ ಪ್ರಧಾನವಾದ ಈ ಭಾಗದಲ್ಲಿ ಇರುವ ಏಕೈಕ ಕೇಂದ್ರವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ನಡೆಸುವುದಾಗಿ ಶ್ರೀಗಳು ಭರವಸೆ ಇತ್ತರು. ಕೃಷಿಕ ನಾಗೇಶ್‌ ಕೈಕಂಬ ಉಪಸ್ಥಿತರಿದ್ದರು.

ತೆಂಗು ಸಂಶೋಧನ ಕೇಂದ್ರ ಕೈ ತಪ್ಪುವುದಕ್ಕೆ ಅವಕಾಶ ನೀಡುವುದಿಲ್ಲ. ಈ ಹಿಂದೆ ತಾನು ಕೇಂದ್ರ ಕೃಷಿ ಸಚಿವರ ಜತೆ ಅಧಿಕಾರಿಗಳ ಸಮ್ಮುಖವೇ ಸಭೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ ನಡೆಸಿದ್ದೆ. ಆ ಬಳಿಕವೂ ನೋಟಿಸ್‌ ಜಾರಿಯಂತಹ ಸಮಸ್ಯೆ ಪುನರಾವರ್ತನೆ ಆಗುತ್ತಿದೆ. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವೆ.
– ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವರು

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.