ಮನೋರಂಜನೆಯೂ ಇದ್ದಾಗ ಜೀವನ ಪರಿಪೂರ್ಣ: ಡಾ| ಹೆಗ್ಗಡೆ
Team Udayavani, Aug 2, 2018, 2:12 PM IST
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಯ ಆಟಿ ಕೂಟ ಕಾರ್ಯಕ್ರಮ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಕ್ಷೇತ್ರದ ಧರ್ಮಾಧಿಕಾರಿ, ಯೋಜನೆಯ ಅಧ್ಯಕ್ಷ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಸಿಬಂದಿ ಕರ್ತವ್ಯ ನಿರ್ವಹಣೆ ಜತೆಗೆ ಇತರ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು. ಕೆಲಸದ ಜತೆಗೆ ಮನೋರಂಜನೆಯೂ ಇದ್ದಾಗ ಜೀವನ ಪರಿಪೂರ್ಣವಾಗುವುದು ಎಂದರು.
ವಿವಿಧ ಆಟೋಟ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ, ವೈವಿಧ್ಯಮಯ ಸೊಪ್ಪುಗಳ ಪ್ರದರ್ಶನ, ತುಳುನಾಡಿನ ಸಂಪ್ರದಾಯವನ್ನು ಪ್ರತಿಬಿಂಬಿಸುವ ಪ್ರಾಚೀನ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಹೇಮಾವತಿ ವಿ. ಹೆಗ್ಗಡೆ ಹಾಗೂ ಸುಪ್ರಿಯಾ ಹರ್ಷೇನ್ದ್ರ ಕುಮಾರ್ ಅವರು ತಿಂಡಿ-ತಿನಿಸುಗಳ ಪ್ರದರ್ಶನ, ಪ್ರಾಚೀನ
ವಸ್ತುಗಳ ಪ್ರದರ್ಶನವನ್ನು ವೀಕ್ಷಿಸಿ, ಸಿಬಂದಿಗೆ ಹಾರೈಸಿದರು. ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ಅವರು ಆಟಿಯ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಬಾಲ್ಯದ ದಿನಗಳ ಆಟೋಟಗಳನ್ನು ನೆನಪು ಮಾಡಿಕೊಂಡು ಇವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿಕೊಂಡು ಹೋಗುವಂತೆ ಕರೆ ನೀಡಿದರು. ಯೋಜನೆಯ ಕೇಂದ್ರ ಕಚೇರಿಯ ಎಲ್ಲ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು, ಸಿಬಂದಿ, ಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.