![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 29, 2024, 6:40 AM IST
ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಮಹಿಳೆ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದೀಗ ಪುತ್ತಿಲ ಪರಿವಾರದ ಹೆಸರಿನಲ್ಲಿ ಅರುಣ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದಿರುವ ಆರೋಪ ಪ್ರತ್ಯಾರೋಪಗಳು ಎಲ್ಲವೂ ಜನತೆಯ ಮುಂದಿರುವುದು ನಮಗೆಲ್ಲ ತಿಳಿದ ವಿಷಯ. ಚುನಾವಣ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಷಯಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ. ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ.
ಮುಂದಿನ ದಿನಗಳಲ್ಲಿ ಇದೇ ರೀತಿಯ ರಾಜಕೀಯ ಷಡ್ಯಂತ್ರಗಳನ್ನು ನಡೆಯುವ ಸಾಧ್ಯತೆ ಇದ್ದು ಹೀಗಾಗಿ ನಾನು ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆ ಎಂದವರು ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.