ಬಂಟ್ವಾಳ: ಗೊಂದಲ ಸೃಷ್ಟಿಸಿದ ರಾಸಾಯನಿಕ ಸಿಂಪಡಣೆ
Team Udayavani, Apr 15, 2020, 8:41 AM IST
ರಸ್ತೆಗಳಲ್ಲಿ ರಾಸಾಯನಿಕ ಸಿಂಪಡಿಸುತ್ತಿರುವ ಯುವಕರು.
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು, ಸಜೀಪಪಡು ಹಾಗೂ ಸಜೀಪನಡು ಗ್ರಾಮದಲ್ಲಿ ಸಂಘಟನೆಯೊಂದರ ಕಾರ್ಯಕರ್ತರು ರಾಸಾಯನಿಕ ಸಿಂಪಡಣೆ ಮಾಡಿ ಗೊಂದಲ ಸೃಷ್ಟಿಸಿದ ಘಟನೆ ಮಂಗಳವಾರ ನಡೆದಿದೆ.
ಮೂರು ಗ್ರಾಮಗಳ ಕೆಲವೆಡೆ ರಾಸಾಯನಿಕ ಸಿಂಪಡಣೆ ಮಾಡಿದ್ದು, ಅದಕ್ಕೆ ಅನುಮತಿ ನೀಡಿರುವ ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು ಹಾಗೂ ಬಂಟ್ವಾಳ ಸಿಪಿಐ ಟಿ.ಡಿ. ನಾಗರಾಜ್ ಅವರು ಘಟನೆ ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.
ಅನುಮತಿ ಕೊಟ್ಟಿಲ್ಲ: ಪಿಡಿಒ
ರಾಸಾಯನಿಕ ಸಿಂಪಡಣೆಗೆ ಸಜೀಪಮುನ್ನೂರು ಪಿಡಿಒ ಡಾ| ಪ್ರಕಾಶ್ ಅನುಮತಿ ಕೊಟ್ಟಿದ್ದಾರೆ ಎಂದು ಹೇಳಿದ ಹಿನ್ನೆಲೆಯಲ್ಲಿ ತಾ.ಪಂ. ಇಒ ರಾಜಣ್ಣ ಅವರು ಪಿಡಿಒ ಅವರಿಂದ ಮಾಹಿತಿ ಪಡೆದಿದ್ದಾರೆ. ಮನೆಯ ಮುಂದೆ ಚರಂಡಿಗೆ ಫಿನಾಯಿಲ್ ಹಾಕಿ ಸ್ವತ್ಛಗೊಳಿಸುವುದಕ್ಕೆ ತಿಳಿಸಿದ್ದೇನೆಯೇ ವಿನಃ ರಾಸಾಯನಿಕ ಸಿಂಪಡಣೆಗೆ ಅನುಮತಿ ಕೊಟ್ಟಿಲ್ಲ ಎಂದು ಪಿಡಿಒ ಸ್ಪಷ್ಟಪಡಿಸಿದ್ದಾರೆ. ಪಿಡಿಒ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.