ಬಂಟ್ವಾಳ: ಟಿಪ್ಪರ್ಗೆ ಬುಲೆಟ್ ಮುಖಾಮುಖಿ ಢಿಕ್ಕಿ; ಇಬ್ಬರ ಸಾವು
Team Udayavani, May 8, 2019, 4:40 PM IST
ಬಂಟ್ವಾಳ: ಟಿಪ್ಪರ್ ಗೆ ಮುಖಾಮುಖಿಯಾಗಿ ಢಿಕ್ಕಿಯಾದ ಪರಿಣಾಮ ಬುಲೆಟ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಅವಘಡ ಅಣ್ಣಳಿಕೆ ಹಿರ್ಣಿ ರಸ್ತೆ ನಡುವಿನ ಕುಮೇರ್ ಎಂಬಲ್ಲಿ ಬುಧವಾರ ಸಂಭವಿಸಿದೆ.
ಮೃತರು ಸಿದ್ಧಕಟ್ಟೆಯ ಹಿರ್ಣಿ ನಿವಾಸಿ ರಮೇಶ್ ಪೂಜಾರಿ ಅವರ ಪುತ್ರ, ಬೈಕ್ ಸವಾರ ಸುರೇಂದ್ರ (33), ಸಹ ಸವಾರಿಯಾಗಿದ್ದ ಮೃತರ ಸಂಬಂಧಿ ಜಯಲಕ್ಷ್ಮೀ (36) ಎನ್ನುವವರಾಗಿದ್ದಾರೆ.
ಕೊಡಿಯಾಲ್ಬೈಲ್ಗೆ ತೆರಳುತ್ತಿದ್ದಾಗ ಕರ್ಪೆಯಿಂದ ಬರುತ್ತಿದ್ದ ಟಿಪ್ಪರ್ ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವಾಗಕೊನೆಯುಸಿರೆಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಟ್ವಾಳ ಟ್ರಾಫಿಕ್ ಎಸ್ಸೈ ಮಂಜುನಾಥ್, ಎಎಸ್ಸೈ ಎಂ.ಕೆ.ಕುಟ್ಟಿ ಸೇರಿ ಪೊಲೀಸರು ಸ್ಥಳಕೆಕ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.