Bantwal Crime News: ಟ್ಯಾಂಕರ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Team Udayavani, Aug 5, 2023, 11:15 PM IST
ಬಂಟ್ವಾಳ: ಹಾಲು ಸಾಗಾಟದ ಟ್ಯಾಂಕರ್ ಹಾಗೂ ಬೈಕ್ ಢಿಕ್ಕಿ ಹೊಡೆದು ಪರಿಣಾಮ ದಂಪತಿ ಗಾಯಗೊಂಡ ಘಟನೆ ಆ. 3ರಂದು ಮೆಲ್ಕಾರ್ ಜಂಕ್ಷನ್ನಲ್ಲಿ ನಡೆದಿದೆ.
ಘಟನೆಯಲ್ಲಿ ವಿಟ್ಲ ಕಸ್ಬಾ ನಿವಾಸಿಗಳಾದ ಸವಾರ ಗಂಗಾಧರ ಹಾಗೂ ಸಹಸವಾರೆ ರೇಷ್ಮಾ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಟ್ಯಾಂಕರನ್ನು ಅದರ ಚಾಲಕ ಅಜಾಗರೂಕತೆಯಿಂದ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಪದ್ಮನಾಭ ಬಂಧಿತ ಆರೋಪಿಯಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 324, 355 ಜತೆಗೆ 35 ಸೇರಿದಂತೆ ಹಲವು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮರ ಅಕ್ರಮ ದಾಸ್ತಾನು: ಪ್ರಕರಣ ದಾಖಲು
ಬಂಟ್ವಾಳ: ತಾಲೂಕಿನ ಅಲ್ಲಿಪಾದೆಯ ಕಟ್ಟಿಗೆ ಡಿಪೋವೊಂದರಲ್ಲಿ ಮರ ಅಕ್ರಮ ದಾಸ್ತಾನಿಗೆ ಸಂಬಂಧಿಸಿದಂತೆ ಬಂಟ್ವಾಳ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಮರದ ವ್ಯಾಪಾರಿ ವಿಜಯಕುಮಾರ್ ಅಲ್ಲಿಪಾದೆಗೆ ಸೇರಿದ ಡಿಪೋದಲ್ಲಿ ಅಕ್ರಮ ದಾಸ್ತಾನು ಕಂಡುಬಂದಿದ್ದು, ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.