Bantwal: ಆಸ್ಪತ್ರೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Sep 18, 2023, 11:23 PM IST
ಬಂಟ್ವಾಳ: ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಔಷಧಿಗೆಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಬಡಗಬೆಳ್ಳೂರು ಶಾಲಾ ಬಳಿ ನಿವಾಸಿ, ಬಿಜೆಪಿಯ ಅಮಾrಡಿ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು (42) ಮೃತರು. ಅವರು ಅವಿವಾಹಿತರಾಗಿದ್ದರು. ಜ್ವರ ಗುಣಮುಖವಾಗದ ಹಿನ್ನೆಲೆಯಲ್ಲಿ ಔಷಧಿಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದು, ವೈದ್ಯರು ಪರೀಕ್ಷೆ ಮಾಡುವ ಮುನ್ನವೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪರೀಕ್ಷೆಗೆ ಮುನ್ನವೇ ಅವರು ಮೃತಪಟ್ಟಿರುವ ಕಾರಣದಿಂದ ಸ್ಪಷ್ಟವಾಗಿ ಯಾವ ಖಾಯಿಲೆಯಿಂದ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿಲ್ಲ.
ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರಾಗಿದ್ದ ಅವರು ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿ ಯುವನಾಯಕರಾಗಿ ಬಂಟ್ವಾಳ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದರು. ಜತೆಗೆ ಇತರ ಸಂಘಟನೆ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಸೇರಿದಂತೆ ಹಲವು ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.