ಹೆತ್ತವರು ಮಕ್ಕಳಲ್ಲಿ ಶೈಕ್ಷಣಿಕ ಅರಿವು ಮೂಡಿಸಲಿ: ಕಾರಿಂಜ


Team Udayavani, Aug 6, 2018, 4:18 PM IST

6-agust-16.jpg

ಬಂಟ್ವಾಳ : ಎಸ್ಸಿ-ಎಸ್ಟಿ ಹಾಗೂ ಅಲ್ಪಸಂಖ್ಯಾಕ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿದಿದ್ದು, ಹೆತ್ತವರ ಮೂಲಕ ಶೈಕ್ಷಣಿಕ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಉಡುಪಿ ಸಾ.ಶಿ.ಇ. ಉಪನಿರ್ದೇಶಕ ಶೇಷಶಯನ ಕಾರಿಂಜ ಹೇಳಿದ್ದಾರೆ. ಅವರು ಆ. 5ರಂದು ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆದ ದ.ಕ., ಉಡುಪಿ, ಕೊಡಗು ವಿಭಾಗೀಯ ಮಟ್ಟದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಕಾರ್ಯಾಗಾರ ಹಮ್ಮಿಕೊಂಡಿತ್ತು.

ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಸಂಘಟನೆಯ ರಾಜ್ಯಾಧ್ಯಕ್ಷ ವೆಂಕಟೇಶಯ್ಯ ವಿ.ಟಿ. ಪ್ರಸ್ತಾವಿಸಿ, ಸಂಘಟನೆ ನಡೆದು ಬಂದ ದಾರಿ, ಹೋರಾಟ, ಸರಕಾರದ ಮೀಸಲಾತಿ- ಯೋಜನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಎಸ್ಸಿ, ಎಸ್ಟಿ ಸಂಘಟನೆಯ ಜಿಲ್ಲಾಧ್ಯಕ್ಷ ಆಂಜನೇಯ ಸ್ವಾಮಿ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಪಾಣೆ ಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಸಂಚಾಲಕ ಜನಾರ್ದನ ಭಟ್‌ ಮಾತನಾಡಿದರು. ಮಂಗಳೂರು ಸರಕಾರಿ ಪಾಲಿಟೆಕ್ನಿಕ್‌ನ ಉಪನ್ಯಾಸಕ ಭಾಸ್ಕರ್‌ ವಿಟ್ಲ ವಿಶೇಷ ಉಪನ್ಯಾಸ ನೀಡಿದರು.

ಎಸ್ಸಿ, ಎಸ್ಟಿ ಸಂಘಟನೆಯ ಉಪಾಧ್ಯಕ್ಷೆ ಸುಮಿತ್ರಾ ದುರ್ಗಿ, ಶಾರದಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಭೋಜ, ವಿಭಾಗೀಯ ಮಟ್ಟದ ಪದಾಧಿಕಾರಿಗಳಾದ ಸುಮಿತ್ರಾ, ರಾಮಕೃಷ್ಣ, ಕುಮಾರ್‌, ಧನರಾಜ್‌, ಜಯಮ್ಮ, ಸುರೇಂದ್ರ, ಎಂ.ಡಿ. ಹುಚ್ಚಪ್ಪ, ರಾಜು, ಮಂಜುನಾಥ್‌ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮಾನ
ಎಸೆಸೆಲ್ಸಿಯಲ್ಲಿ ಬಂಟ್ವಾಳ ತಾ|ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಪ್ರಶಿಕ್ಷಾ, ಸ್ಫೂರ್ತಿ, ಶ್ರೇಯಾ, ಸುಧಾಕರ್‌ ಅವರನ್ನು ಸಮ್ಮಾನಿಸಲಾಯಿತು. ಸಾ.ಶಿ.ಇ. ಉಡುಪಿ ಉಪನಿರ್ದೇಶಕ ಶೇಷಶಯನ ಕಾರಿಂಜ ಅವರನ್ನು ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಶಿಕ್ಷಕರ ಶೈಕ್ಷಣಿಕ ಕುಂದುಕೊರತೆ ಬಗ್ಗೆ ರಾಜ್ಯಾಧ್ಯಕ್ಷರ ಜತೆ ಚರ್ಚೆ ನಡೆಯಿತು. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಮಾದೇಶ ತಂಡ ಪ್ರಾರ್ಥಿಸಿ, ರಾಜ್ಯ ಸಂಘಟನ ಕಾರ್ಯದರ್ಶಿ ಧನರಾಜ್‌ ಡಿ.ಆರ್‌ ಸ್ವಾಗತಿಸಿ, ಲಿಂಗರಾಜು ವಂದಿಸಿದರು. ರಾಜೇಶ್‌ ನಿರೂಪಿಸಿದರು.

ಯಶಸ್ಸು ಸಾಧ್ಯ
ಉನ್ನತ ಹುದ್ದೆಗಳಲ್ಲಿ ಎಸ್ಸಿ-ಎಸ್ಟಿ ಸಮುದಾಯ ಹಿಂದುಳಿದಿರುವುದು ಖೇದಕರ. ಸೌಲಭ್ಯಗಳನ್ನು ಹಕ್ಕುಗಳೊಂದಿಗೆ ಹಾಗೂ ಶೈಕ್ಷಣಿಕ ಸೇವೆಯನ್ನು ಕರ್ತವ್ಯದೊಂದಿಗೆ ನಿರ್ವಹಿಸಿದರೆ ಯಶಸ್ಸು ಸಾಧ್ಯ. 
– ಶೇಷಶಯನ ಕಾರಿಂಜ
ಉಡುಪಿ ಸಾ.ಶಿ.ಇ.. ಉಪನಿರ್ದೇಶಕರು

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.