Bantwal ಹೊಟೇಲ್ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ
Team Udayavani, Dec 6, 2023, 6:32 PM IST
ಬಂಟ್ವಾಳ: ಬಂಟ್ವಾಳದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4ರ ತಡರಾತ್ರಿ ಬಂಟ್ವಾಳದ ಬಡ್ಡಕಟ್ಟೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿ ಸೋಮನಾಥ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕಳೆದ 5 ತಿಂಗಳಿನಿಂದ ಹೊಟೇಲ್ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದು, ಡಿ. 4ರ ರಾತ್ರಿ ಕೂಡ ಕೆಲಸ ಮುಗಿಸಿ ಮಲಗಿದ್ದರು.
ಮಂಗಳವಾರ ಬೆಳಗ್ಗೆ ಕಾರ್ಮಿಕ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಮಲಗಿದ್ದ ಕೊಠಡಿಗೆ ಹೋಗಿ ನೋಡಿದಾಗ ಮಲಗಿದ್ದ ಬಳಿ ವಿಷದ ಬಾಟಲಿ ಪತ್ತೆಯಾಗಿದೆ. ಎಬ್ಬಿಸುವಾಗ ಆತ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಅಲ್ಲೇ ಪಕ್ಕದಲ್ಲಿ ಚೀಟಿ ಪತ್ತೆಯಾಗಿದ್ದು, ಆದರೆ ಅದರಲ್ಲಿ ಬರಿದಿರುವ ವಿಚಾರ ತಿಳಿದುಬಂದಿಲ್ಲ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.