Bantwal: ಪತ್ನಿಗೆ ಹಲ್ಲೆ ನಡೆಸಿ 33 ಪವನ್ ಚಿನ್ನ ದೋಚಿದ ಪತಿ; ಪ್ರಕರಣ ದಾಖಲು
Team Udayavani, Jan 13, 2024, 1:01 AM IST
ಬಂಟ್ವಾಳ: ಮಹಿಳೆಯೋರ್ವಳಿಗೆ ಆಕೆಯ ಪತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಆಕೆಯ 33 ಪವನ್ ಚಿನ್ನ ದೋಚಿದ ಪ್ರಕರಣ ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಆಕೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಆಕೆಯ ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆಯ ಕುರಿತು ಪುದು ಗ್ರಾಮ ನಿವಾಸಿ ಬಿ.ಬಿ.ಫಾತಿಮಾ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್ ಫಾರೂಕ್, ಆತನ ಸಹೋದರರಾದ ಮುಸ್ತಾಫಾ, ರಿಯಾಜ್, ಮೊಹಮ್ಮದ್, ಸಂಬಂಧಿಕರಾದ ದುಲೇಕಾ, ಆಸ್ಮಾ, ಅರ್ಷಿದಾ ಆರೋಪಿಗಳಾಗಿದ್ದಾರೆ.
ಫಾತಿಮಾ ನೀಡಿದ ದೂರಿನಲ್ಲಿ ವಿವರಿಸಿದಂತೆ, ಸುಮಾರು 14 ವರ್ಷಗಳ ಹಿಂದೆ ಆಕೆಗೆ ಉಮ್ಮರ್ ಫಾರೂಕ್ ಜತೆ ವಿವಾಹವಾಗಿದ್ದು, ಈ ವೇಳೆ 5 ಲಕ್ಷ ರೂ. ಹಾಗೂ 63 ಪವನ್ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ನೀಡಿದ್ದರು. ಬಳಿಕ ಆರೋಪಿ ಪತಿ ಹೆಚ್ಚಿನ ಹಣ ತರುವಂತೆ ಪತ್ನಿಗೆ ಕಿರುಕುಳದ ಜತೆಗೆ ಹಲ್ಲೆಯನ್ನೂ ಮಾಡುತ್ತಿದ್ದನು. ಆತನ ಸಹೋದರರು, ಅವರ ಪತ್ನಿಯರು ಕೂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಫಾತಿಮಾ ನಂದಾವರದಲ್ಲಿ ಫ್ಲಾಟ್ ಖರೀದಿಸಿ ವಾಸವಾಗಿದ್ದರು.
ಆರೋಪಿ ಪತಿಯು ಡಿ. 30ರಂದು ಆಕೆಯ ಫ್ಲಾಟ್‌ಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ರಕ್ತ ಬರುವಂತೆ ಹೊಡೆದು ನೀನು ಬೇಡ, ಬೇರೆ ಮದುವೆಯಾಗುವುದಾಗಿ ಹೇಳಿ ಹೋಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.