Bantwal: ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ಸು;13 ಮಂದಿಗೆ ಗಾಯ
Team Udayavani, Sep 23, 2024, 6:02 PM IST
ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಕೊಪ್ಪಳ ಬಳಿ ಧರ್ಮಸ್ಥಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ.
ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದು, 13 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ತಲೆ ಹಾಗೂ ಬೆನ್ನುಮೂಲೆ ಗಾಯಗೊಂಡಿರುವ ತನುಶ್ರೀ(17), ಶಾಕೀರ್(32), ಶೋಭಾ ಶೆಟ್ಟಿ(48), ಕಸ್ತೂರಿ(68) ಹಾಗೂ ವಿಶ್ವನಾಥ(70) ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಉಳಿದಂತೆ ಸಣ್ಣಪುಟ್ಟ ಗಾಯಗೊಂಡಿರುವ ಪವನ್(30), ನಿಖೀತ(29), ಸುಧಾಮ(23), ಹೇಮಾವತಿ(43), ರಾಜಶ್ರೀ(27), ಹೇಮಲತಾ(40), ಶಿಲ್ಪಾ(16) ಹಾಗೂ ಸ್ವಾತಿ(16) ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂದು ಬಂಟ್ವಾಳ ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಬಸ್ಸು ಸಂಪೂರ್ಣ ಮಗುಚಿ ಬಿದ್ದ ಕಾರಣ ಅದರೊಳಗಿದ್ದ ಪ್ರಯಾಣಿಕರಿಗೆ ಹೊರ ಬರಲು ಸಾಧ್ಯವಾಗದೆ ಇದ್ದು, ಬಳಿಕ ಸ್ಥಳೀಯರ ನೆರವಿನಿಂದ ಪ್ರಯಾಣಿಕರು ಹೊರಬಂದರು.
ಬಸ್ಸು ವೇಗವಾಗಿ ಸಂಚರಿಸುತ್ತಿದ್ದು, ಈ ವೇಳೆ ಯಾವುದೇ ವಾಹನ ಅಡ್ಡ ಬಂತ್ತೆಂದು ಚಾಲಕ ಬ್ರೇಕ್ ಹಾಕಿದ್ದು, ಈ ವೇಳೆ ಬಸ್ಸು ಏಕಾಏಕಿ ಹೆದ್ದಾರಿಯ ಅಂಚಿಗೆ ಸಂಚರಿಸಿ ಪಲ್ಟಿ ಹೊಡೆದಿದೆ ಎಂದು ಬಸ್ಸು ಚಾಲಕ ಹೇಳಿರುವುದಾಗಿ ಸಂಚಾರ ಪೊಲೀಸರು ತಿಳಿಸಿದ್ದಾರೆ. ಬಸ್ಸಿನ ಟಯರ್ ಸವೆದು ಬ್ರೇಕ್ ಸಿಗದೆ ಬಸ್ಸು ಪಲ್ಟಿಯಾಗಿದೆ ಎಂದು ಸ್ಥಳೀಯ ಒಂದಷ್ಟು ಮಂದಿ ಆರೋಪಿಸಿದ್ದಾರೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣಾ ಪಿಎಸ್‌ಐ ಸುತೇಶ್ ಕೆ.ಪಿ. ಭೇಟಿ ನೀಡಿ ಪರಿಶೀಲಿಸಿದ್ದು, ಬಳಿಕ ಕ್ರೇಮ್ ಮೂಲಕ ಬಸ್ಸನ್ನು ತೆರವು ಮಾಡಲಾಯಿತು. ಈ ವೇಳೆ ಕೆಲಹೊತ್ತು ಹೆದ್ದಾರಿಯಲ್ಲಿ ಸಂಚಾರದೊತ್ತಡ ಉಂಟಾಗಿತ್ತು ಎನ್ನಲಾಗಿದೆ.
ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.