Bantwal: ಲಾರಿ-ಕಾರು ಢಿಕ್ಕಿ; ಕಾರು ಚಾಲಕ ಗಾಯ
Team Udayavani, Aug 31, 2024, 7:46 PM IST
ಬಂಟ್ವಾಳ: ಮೆಲ್ಕಾರ್-ಮುಡಿಪು ರಸ್ತೆಯ ಮಾರ್ನಬೈಲಿನಲ್ಲಿ ಲಾರಿ ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ಬೋಳಂಗಡಿ ನಿವಾಸಿ ಮುಸ್ತಫಾ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಲಾರಿಯು ಮುಡಿಪು ಕಡೆಗೆ ಸಿಮೆಂಟ್ ತುಂಬಿದ ಬ್ಯಾಗ್ಗಳನ್ನು ಸಾಗಿಸುತ್ತಿದ್ದು, ಕಾರು ಮೆಲ್ಕಾರ್ ಕಡೆಗೆ ಆಗಮಿಸುತ್ತಿತ್ತು ಎನ್ನಲಾಗಿದೆ.
ಢಿಕ್ಕಿಯಾದ ರಭಸಕ್ಕೆ ಕಾರು ಒಂದು ಸುತ್ತು ತಿರುಗಿದ್ದು, ಸಂಪೂರ್ಣ ಜಖಂಗೊಂಡಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.