142 ಕಾಮಗಾರಿ ಮುಕ್ತಾಯ; 97.83 ಲಕ ರೂ. ವೆಚ್ಚ 


Team Udayavani, Dec 5, 2018, 2:56 PM IST

5-december-14.gif

ಬಂಟ್ವಾಳ: ತಾ.ಪಂ. ಆಡಳಿತಕ್ಕೆ 2017-18ನೇ ಸಾಲಿನಲ್ಲಿ ಬಿಡುಗಡೆಯಾದ 1 ಕೋ. ರೂ. ಅನುದಾನದಲ್ಲಿ 142 ಕಾಮಗಾರಿ ಮುಕ್ತಾಯವಾಗಿದ್ದು, 97.83 ಲಕ್ಷ ರೂ. ವೆಚ್ಚವಾಗಿದೆ ಎಂದು ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ತಿಳಿಸಿದರು.

ಅವರು ಡಿ. 4ರಂದು ತಾ.ಪಂ. ಸಭಾಂಗಣದಲ್ಲಿ ನಡೆದ ಜಮಾಬಂದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿವರ ನೀಡಿದರು. ಅಧಿಭಾರ ಶುಲ್ಕದ 32.82 ಲಕ್ಷ ರೂ. ಅನುದಾನದಲ್ಲಿ 22 ಕಾಮಗಾರಿ ಕೈಗೆತ್ತಿಕೊಂಡು 13 ಪೂರ್ಣಗೊಂಡಿವೆ. ಇದಕ್ಕೆ 23.71 ಲಕ್ಷ ರೂ. ಖರ್ಚು ಮಾಡಿದೆ. ಬಾಡಿಗೆ ಬಡ್ಡಿ ಹಣ 9.70 ಲಕ್ಷ ರೂ. ಅನುದಾನದಲ್ಲಿ ಎರಡು ಕಾಮಗಾರಿಗಳನ್ನು ಮಾಡಿದೆ. ಸೇರ್ಪಡೆ – ಮಾರ್ಪಾಡು ಅನುದಾನ 8.98 ಲಕ್ಷ ರೂ. ಬಿಡುಗಡೆಯಾಗಿದ್ದು, ಅದರಲ್ಲಿ 8.90 ಖರ್ಚು ಮಾಡಿ 18 ಕಾಮಗಾರಿ ಮುಕ್ತಾಯ ಆಗಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ 9.10 ಲಕ್ಷ ರೂ. ಬಿಡುಗಡೆ ಆಗಿದ್ದು, 9.08 ಲಕ್ಷ ರೂ. ಖರ್ಚು ಮಾಡಿ 8 ಕಾಮಗಾರಿ ಪೂರ್ತಿ ಆಗಿದೆ. ಅಂಗನವಾಡಿ ಕಾಮಗಾರಿಗೆ 23 ಲಕ್ಷ ರೂ. ಬಿಡುಗಡೆ ಆಗಿದ್ದು, 22.70 ಲಕ್ಷ ರೂ. ವೆಚ್ಚದಲ್ಲಿ 55 ಕಾಮಗಾರಿ ಪೂರ್ತಿ ಆಗಿದೆ. ತಾ.ಪಂ. ಅಭಿವೃದ್ಧಿಯಲ್ಲಿ 3 ಲಕ್ಷ ರೂ. ಬಿಡುಗಡೆ ಆಗಿದ್ದು, 2 ಕಾಮಗಾರಿ ಅನುಷ್ಠಾನ ಪೂರ್ತಿ ಆಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ತಮಗೆ ನಿಗದಿಪಡಿಸಿದ ಅಭಿವೃದ್ಧಿ ಕಾಮಗಾರಿಗಳ ಗುರಿ, ಬಿಡುಗಡೆಯಾದ ಅನುದಾನ, ಖರ್ಚು ಹಾಗೂ ಉಳಿಕೆ ಮೊತ್ತದ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ. ಯೋಜನ ನಿರ್ದೇಶಕ ಎಂ.ಬಿ. ನಾಯಕ್‌ ಜಮಾಬಂದಿಯನ್ನು ನಡೆಸಿಕೊಟ್ಟರು.

ಗ್ರಾಮಸ್ಥರಿಗೆ ಸ್ಪಷ್ಟ ಮಾಹಿತಿ
ಈ ಸಂದರ್ಭ ಮಾತನಾಡಿದ ಅವರು, ಗ್ರಾಮಸಭೆಗಳಲ್ಲಿ ಇಲಾಖೆ ಅಧಿಕಾರಿಗಳು ಸರಕಾರದ ಯೋಜನೆಯ ಬಗ್ಗೆ ಗ್ರಾಮಸ್ಥರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ಅಲ್ಲದೆ, ಗ್ರಾ.ಪಂ.ಗಳಲ್ಲಿ ಯೋಜನೆಯ ಬಗ್ಗೆ ಕರಪತ್ರವನ್ನು ಫಲಕಗಳಲ್ಲಿ ಅಳವಡಿಸಿದರೆ ಉತ್ತಮ. ನರೇಗ ಯೋಜನೆಯಲ್ಲಿ ಶಾಲಾ ಆವರಣದಲ್ಲಿ ಕೈತೋಟ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಮುತುವರ್ಜಿ ವಹಿಸಬೇಕು ಎಂದರು.

ಸದಸ್ಯರು, ಅಧಿಕಾರಿಗಳ ಸಹಕಾರ
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ತಾ.ಪಂ. ವ್ಯಾಪ್ತಿಯ ಎಲ್ಲ ಕಾಮಗಾರಿಗಳು ತಾ.ಪಂ. ಸದಸ್ಯ ಹಾಗೂ ಅಧಿಕಾರಿಗಳ ಸಹಕಾರದಿಂದ ಪೂರ್ಣಗೊಳಿಸಲು ಸಾಧ್ಯವಾಗಿದೆ. ಕೆಲವೊಂದು ಸಮಸ್ಯೆಗಳು ಎದುರಾದಾಗ ಅದನ್ನು ಮಾತುಕತೆಯ ಮೂಲಕ ಬಗೆಹರಿಸುವ ಕಾರ್ಯ ಮಾಡಲಾಗಿದೆ ಎಂದರು.

ವಿಶೇಷಚೇತನ ಮಕ್ಕಳು ಶಿಕ್ಷಣದಿಂದ ವಂಚಿತ
ತಾಲೂಕಿನ ವಿಶೇಷಚೇತನ ಮಕ್ಕಳನ್ನು ಗುರುತಿಸುವ ಕೆಲಸವಾಗುತ್ತಿಲ್ಲ. ಅದಲ್ಲದೆ ಕೆಲವು ವಿಶೇಷ ಚೇತನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಈ ಬಗ್ಗೆ ಇಲಾಖೆ ಯಾವುದೇ ಮುತುವರ್ಜಿ ವಹಿಸಿದಂತೆ ಕಾಣುತ್ತಿಲ್ಲ. ಕೆಲವು ಖಾಸಗಿ ಶಾಲೆಯಲ್ಲಿ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ ಎಂದು ತಾ.ಪಂ. ಸದಸ್ಯ ಹೈದರ್‌ ಕೈರಂಗಳ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ, ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿಶೇಷ ಮಕ್ಕಳಿಗೆ ಶಿಕ್ಷಣ ಉಚಿತವಾಗಿದ್ದು, ಖಾಸಗಿ ಶಾಲೆಗಳ ಬಗ್ಗೆ ಮಾಹಿತಿ ಕಲೆಹಾಕಲಾಗುವುದು ಎಂದರು. ಜಿ.ಪಂ. ಸಿಇಒ ಪ್ರತಿಕ್ರಿಯಿಸಿ, ನಿಯಮ ಪಾಲನೆಯಾಗದ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಲ್ಲದೆ, ವಿಶೇಷಚೇತನ ಮಕ್ಕಳಿಗಾಗಿ ತಾಲೂಕು ಮಟ್ಟದಲ್ಲಿ ಶಿಬಿರವನ್ನು ಏರ್ಪಡಿಸುವಂತೆ ಸಲಹೆ ನೀಡಿದರು. ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ವಿಶೇಷಚೇತನ ಮಕ್ಕಳ ಸರ್ವೆ ಕಾರ್ಯ ಕೈಗೊಂಡಿದ್ದು, ಅವರಿಗೆ ಬೇಕಾದ ಸಲಕರಣೆಗಳನ್ನು ಪಟ್ಟಿ ಮಾಡಿ ತಾ.ಪಂ.ಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ ಉಪಸ್ಥಿತರಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.

ಅನುದಾನ ಬೆಳ್ತಂಗಡಿಗೆ 
ತಾ|ನ ಶಿಕ್ಷಣ, ಸಿಡಿಪಿಒ ಹಾಗೂ ಪಶುಸಂಗೋಪನೆ ಇಲಾಖೆಗೆ ಸಂಬಂಧಿಸಿದ ಅನುದಾನ ಮತ್ತು ವೇತನ ತಾಂತ್ರಿಕ ಸಮಸ್ಯೆಯಿಂದ ಬೆಳ್ತಂಗಡಿಗೆ ವರ್ಗಾವಣೆ ಯಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌ ತಿಳಿಸಿದರು. ಎಂ.ಬಿ. ನಾಯಕ್‌ ಪ್ರತಿಕ್ರಿಯಿಸಿ, ಉಭಯ ತಾ|ಗಳ ಪ್ರಾರಂಭ ಅಕ್ಷರ ‘ಬಿ’ ಆದ ಕಾರಣದಿಂದ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಈ ಕುರಿತು ಜಿ.ಪಂ. ಸಿಇಒ ಹಣಕಾಸು ಇಲಾಖೆಗೆ ಖುದ್ದಾಗಿ ತೆರಳಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಮುಂದೆ ಈ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.