Bantwal: ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Sep 25, 2023, 11:25 PM IST
ಬಂಟ್ವಾಳ: ಕಳವು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪುತ್ತೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಬಂಧಿತ ಆರೋಪಿ. ಈತ 2017ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದ. ಜತೆಗೆ ಬಂಟ್ವಾಳ ನಗರ, ವಿಟ್ಲ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೋಣಾಜೆ ಪೊಲೀಸ್ ಠಾಣೆಗಳಲ್ಲೂ ಕಳ್ಳತನಕ್ಕೆ ಸಂಬಂಧಿಸಿ ಹಲವು ಪ್ರಕರಣಗಳು ದಾಖಲಾಗಿತ್ತು.
ಸಿಪಿಐ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಹರೀಶ್ ಹಾಗೂ ಮೂರ್ತಿ ನೇತೃತ್ವದಲ್ಲಿ ಸಿಬಂದಿ ಗಣೇಶ್‌ಪ್ರಸಾದ್, ಪುನೀತ್‌ಕುಮಾರ್, ವಿಜಯಕುಮಾರ್, ರಂಜಾನ್ ಅವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.