Bantwal: ಬೆಳ್ಳಂಬೆಳಿಗ್ಗೆ ತಾಯಿ, ಮಗಳಿಗೆ ಚಾಕು ತೋರಿಸಿ ನಗನಗದು ದೋಚಿದ ಮುಸುಕುಧಾರಿಗಳು
Team Udayavani, Jan 11, 2024, 9:47 AM IST
ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ಇಂದು ಬೆಳ್ಳಂಬೆಳಗ್ಗೆ ಬೆಳಿಗ್ಗೆ ವಗ್ಗದಲ್ಲಿ ನಡೆದಿದೆ.
ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ.
ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ.
ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಚಿನ್ನಾಭರಣಗಳು, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ದೋಚಿದ್ದಾರೆ.
ಇಂದು ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಬೆಲ್ ಹಾಕಿದಾಗ ಬಾಗಿಲು ತೆಗದು ನೋಡಿದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆಒಡ್ಡಿದಾಗ ಗೊದ್ರೇಜ್ ನ ಬೀಗದ ಕೀ ನೀಡಿದ್ದಾರೆ.
ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ವರದಿಗಾರ ಆಸ್ಟಿನ್ ಪಿಂಟೋ ಮಾಧ್ಯಮ ದವರಿಗೆ ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಅಂಗಡಿಯೊಂದರಲ್ಲಿ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು.
ಇಂದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿದ್ದಾರೆ. ಹಾಗೂ ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Ayodhya ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಅಡ್ವಾಣಿ: VHP
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.