ಬಂಟ್ವಾಳ: ಎರಡು ಕಾರು-ಬಸ್ ನಡುವೆ ಭೀಕರ ಅಪಘಾತ; ಓರ್ವ ಗಂಭೀರ, ನಾಲ್ವರಿಗೆ ಗಾಯ
Team Udayavani, Oct 21, 2022, 1:03 PM IST
ಬಂಟ್ವಾಳ: ಇಲ್ಲಿಗೆ ಸಮೀಪದ ಮಣಿಹಳ್ಳದಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಉಳಿದ ನಾಲ್ವರು ಸಣ್ಣ ಪ್ರಮಾಣದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ ಪ್ರವೀಣ್ ಜೋಶಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ.ಇ. ಪ್ರವೀಣ್ ಜೋಶಿ ಅವರ ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಆ ಬಳಿಕ ಹಿಂಬದಿಯಿಂದ ಬಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು. 112 ಹೊಯ್ಸಳ ಪೊಲೀಸ್ ವಾಹನ ಚಾಲಕ ವಿಶ್ವನಾಥ ಅವರು ಗಾಯಳು ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸರಿಸಲಾಯಿತು. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ. ಮೂರ್ತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.