Bantwala: ಕಾರು ಡಿಕ್ಕಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು
ಯುವತಿಗೆ ನಿಶ್ಚಿತಾರ್ಥ ನಡೆದು ಮದುವೆ ದಿನ ನಿಗದಿಯಾಗಿತ್ತು
Team Udayavani, Dec 29, 2023, 9:41 AM IST
ಬಂಟ್ವಾಳ: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ.
ಬಿಸಿರೋಡಿನ ಕೈಕಂಬ ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು. ಇಲ್ಲಿನ ಸ್ಥಳೀಯ ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ.
ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಈಕೆ ಕೆಲಸಕ್ಕೆ ರಜೆ ಪಡೆದುಕೊಂಡು ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಳು ಎಂದು ಸಂಬಂಧಿಕರು ತಿಳಿಸಿದ್ದಾರೆ.
ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಫ್ಟ್ ಕಾರು ಚೈತ್ರಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಇವಳನ್ನು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಹೆಚ್.ಸಿ.ರಮೇಶ್ ಖಾಸಗಿ ವಾಹನದ ಮೂಲಕ ಗಾಯಳುವನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಗಂಭೀರ ಗಾಯಗೊಂಡ ಈಕೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಮನೆಯೊಂದರ ಕಾಂಪೌಂಡ್ ಗೆ ಕೂಡ ಗುದ್ದಿ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾರು ಚಾಲಕ ಹಾಗೂ ಆತನ ಜೊತೆಯಿದ್ದ ಮೂವರು ಸಹ ಪ್ರಯಾಣಿಕ ಪರಾರಿಯಾಗಿದ್ದು, ಮಲ್ಲೂರು ಕಡೆ ಹೋಗುವವರು ಎಂದು ಹೇಳಲಾಗಿದೆ.
ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದುವೆಗೆ ನಿಶ್ಚಿತಾರ್ಥ ನಡೆದಿತ್ತು:
ಚೈತ್ರ ಖ್ಯಾತ ಮೇಕಪ್ ಆರ್ಟಿಸ್ಟ್ ದಿ. ಭಾಸ್ಕರ್ ಆಚಾರ್ಯ ಅವರ ಮಗಳು. ಈಕೆ ಮಂಗಳೂರಿನ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ರಜಾ ಪಡೆದುಕೊಂಡಿದ್ದಳು.
ಇವಳ ಸ್ನೇಹಿತೆಯೋರ್ವಳ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ತಾಯಿ ಜೊತೆ ಅವಳ ಮನೆಗೆ ಹೋಗುತ್ತಿದ್ದ ವೇಳೆ ಕಾರು ಇವಳಿಗೆ ಡಿಕ್ಕಿ ಹೊಡೆದಿದೆ.
ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮಾ.3 ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಇದೀಗ ಮದುವೆಯಾಗಿ ಗಂಡನ ಮನೆಗೆ ಹೋಗಬೇಕಿದ್ದ ಯುವತಿಯನ್ನು ಕಾರೊಂದು ಮಸಣ ಸೇರುವಂತೆ ಮಾಡಿದೆ.
ಗಾಂಜಾ ಸೇವಸಿದ್ದರಾ?
ಗಾಂಜಾ ಸೇವನೆ ಮಾಡಿ ಕಾರು ಓಡಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಪೊಲೀಸರಿಗೆ ಸಂಬಂಧಿಕರು ದೂರು ನೀಡಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.