ಚಾಲಕನ ನಿಯಂತ್ರಣ ತಪ್ಪಿದ ಕಾರು;ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿ;ಮಹಿಳೆ ಸಾವು
Team Udayavani, Jul 6, 2023, 3:20 PM IST
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆ ಎಂಬಲ್ಲಿ ಜು.6ರ ಗುರುವಾರ ನಡೆದಿದೆ.
ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರಿ ಖತೀಜಹನ (20) ಮೃತಪಟ್ಟ ಯುವತಿ. ಇವರ ಜೊತೆ ಖತೀಜಹನಳ ತಾಯಿ ಸಮೀಮ ಮತ್ತು ಚಾಲಕ ಶಾನ್ ಯಾವುದೇ ಅಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಖತೀಜಹನ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಅಲರ್ಜಿ ರೋಗಕ್ಕೆ ಚಿಕಿತ್ಸೆ ಪಡೆಯುವ ಹಿನ್ನೆಲೆ ವೈದ್ಯರನ್ನು ಭೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ ಹೋಗುವ ವೇಳೆ ಈ ಘಟನೆ ನಡೆದಿದೆ.
ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಎಂಬವರು ಹೊರೆಕ್ಕೆಸೆಯಲ್ಟಿಟ್ಟಿದ್ದಾರೆ. ಗಂಭೀರ ಗಾಯಗೊಂಡ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಯಾವುದೇ ಪ್ರಯೋಜನವಾಗಿಲ್ಲ. ಅದಾಗಲೇ ಆಕೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.