Bantwala: ಅನಾರೋಗ್ಯ, ಉದ್ಯೋಗವಿಲ್ಲ ಎಂದು ಮನನೊಂದು ಕಲಾವಿದ ಆತ್ಮಹತ್ಯೆ

Team Udayavani, Aug 14, 2023, 11:17 AM IST

6-bantwala

ಬಂಟ್ವಾಳ: ಒಂದಡೆ ಅನಾರೋಗ್ಯ, ಇನ್ನೊಂದೆಡೆ ಉದ್ಯೋಗ ಇಲ್ಲ, ಜೀವನವೇ ದುಸ್ತರ, ಬದುಕಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದ ಕಲಾವಿದ  ಯುವಕನೋರ್ವ ಬಾವಿಗೆ ಹಾರಿ ಜೀವ ಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.

ಮಿತ್ತಮಜಲು ನಿವಾಸಿ ಚಿತ್ರಕಾರ ಸಾಗರ್ ಆಚಾರ್ಯ (26) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ ಯುವಕ.

ಬೆಳಿಗ್ಗೆ ಸುಮಾರು 8.30 ರ ವೇಳೆ ಮನೆಯಂಗಳದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾರಣವೇನು?

ಸಾಗರ್ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ನಿಗೂಢವಾಗಿದೆಯಾದರೂ ಆತನ ಅನಾರೋಗ್ಯದ ಕಾರಣ ಜೀವನದಲ್ಲಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ.

ಈತ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದಲ್ಲದೆ, ನೆರೆಹೊರೆಯವರೊಂದಿಗೆ, ಸ್ನೇಹಿತರೊಂದಿಗೆ ಈತನ ನೋವನ್ನು ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಸಾಗರ್ ಒಬ್ಬ ಅತ್ಯದ್ಭುತ ಚಿತ್ರಕಾರ. ಆದರೆ ಆತನ ಕಲೆಗೆ ಜೀವ ತುಂಬಲು ಆ ವಿಧಿ ಬಿಡಲಿಲ್ಲ. ಕಲಾವಿದನಾಗಿದ್ದ ಸಾಗರ್ ಕಳೆದ ಎರಡು ವರ್ಷಗಳ ಹಿಂದೆ ಬಿಸಿರೋಡಿನ ಸಿ.ಡಿ.ಪಿ.ಒ.ಕಚೇರಿಯಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಅದಾಗಲೇ ಈತನಿಗೆ ಮೊದಲೇ ಇದ್ದ ಕಿಡ್ನಿ ಸಮಸ್ಯೆ ಉಲ್ಬಣಗೊಂಡಿತು. ಹಾಗಾಗಿ ಈತ ಕೆಲಸ ಬಿಟ್ಟು ಮನೆಯಲ್ಲೇ ಇದ್ದ.

ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಲೇಬೇಕು ಎಂಬ ಸ್ಥಿತಿ ಒಂದೆಡೆಯಾದರೆ ಇನ್ನೊಂದೆಡೆ ಎರಡು ಕಿಡ್ನಿ ವೈಫಲ್ಯ ಕಂಡ ಹಿನ್ನೆಲೆ ಈತನ ತಂದೆಯ ಒಂದು ಕಿಡ್ನಿಯನ್ನು ಈತನಿಗೆ ನೀಡಲಾಗಿತ್ತು.

ಮರದ ಕೆಲಸ ಮಾಡುತ್ತಿದ್ದ ತಂದೆಯ ಕಿಡ್ನಿ ಮಗನಿಗೆ ನೀಡಿದ ಬಳಿಕ ತಂದೆಗೆ ಕೆಲಸ ಮಾಡಲು ಸ್ವಲ್ಪ ಕಷ್ಟದ ಸ್ಥಿತಿ ಉಂಟಾಗಿತ್ತು. ಈ ನಡುವೆ ಮನೆಯಲ್ಲಿ ತಾಯಿಗೂ ಸ್ವಲ್ಪ ಅನಾರೋಗ್ಯದ ಸಮಸ್ಯೆ ಉಂಟಾಗಿತ್ತು. ಮನೆಯಲ್ಲಿರುವ ಎಲ್ಲಾರು ಅನಾರೋಗ್ಯ ಪೀಡಿತರಾಗಿ ದುಡಿಯುವ ಕೈಗಳಿಗೆ ಶಕ್ತಿಯಿಲ್ಲ, ಔಷಧಿಗೆ ಕಾಸಿಲ್ಲ, ಸರಿಯಾದ ಉದ್ಯೋಗವು ಇಲ್ಲ. ಹೀಗೆ ಅನೇಕ ಕಾರಣಗಳಿಗೆ ಮನನೊಂದು ಅನೇಕ ಬಾರಿ ಈ ವಿಚಾರವನ್ನು ಸ್ನೇಹಿತರ ಬಳಿ ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಈತನಿಗೆ ಕಿಡ್ನಿ ವೈಫಲ್ಯದ ಸಮಸ್ಯೆ ಉಂಟಾದ ಸಂದರ್ಭದಲ್ಲಿ ಮಾಧ್ಯಮಗಳು ನೆರವಿಗಾಗಿ ವರದಿಗಳನ್ನು ಮಾಡಿತ್ತು. ಆದರೆ ಅತ್ಯಂತ ಕಷ್ಟಕರ ಜೀವನವನ್ನು ಸಹಿಸಲಾರದೆ ಸಾಗರ್ ಬಾವಿಗೆ ಹಾರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾನೆ ಎಂಬುದು ಸ್ಥಳೀಯರ ಮಾತಾಗಿದೆ.

ಸುಮಾರು 30 ಅಡಿ ಆಳದಲ್ಲಿರುವ ಬಾವಿಯಿಂದ ಸಾಗರ್ ಅವರ ಮೃತದೇಹವನ್ನು ಬಂಟ್ವಾಳ ಅಗ್ನಿಶಾಮಕ ದಳದವರು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಸುನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರೋಹಿತ್, ಕಿರಣ್ ಕುಮಾರ್, ರಾಜೇಶ್, ಸುರೇಂದ್ರ ಹಾಗೂ ನಾಗರಾಜ್ ಅವರ ನೆರವಿನಿಂದ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಲಾಯಿತು.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

1-vitla

Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ

Dhrmasthala-Heggade

Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.