Bantwala: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ
ಸುಮಾರು 50 ಮಂದಿ ಪ್ರವಾಸಿಗರಿದ್ದ ತಂಡ
Team Udayavani, Dec 15, 2024, 3:32 PM IST
ಬಂಟ್ವಾಳ: ತಾಲೂಕಿನ ಶಂಭೂರಿನ ಶ್ರೀ ಸಾಯಿ ಮಂದಿರದಿಂದ ಹೊರಟ ಪ್ರವಾಸಿಗರ ಬಸ್ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ತಾಂತ್ರಿಕ ದೋಷದ ಕಾರಣಕ್ಕೆ ಪಲ್ಟಿಯಾಗಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಡಿ.15ರ ರವಿವಾರ ನಡೆದಿದೆ.
ಸುಮಾರು 50 ಮಂದಿಯಿದ್ದ ಪ್ರವಾಸಿಗರ ತಂಡ ಖಾಸಗಿ ಬಸ್ಸಿನ ಮೂಲಕ ರವಿವಾರ ಮುಂಜಾನೆ 5ರ ಸುಮಾರಿಗೆ ಶಂಭೂರಿನಿಂದ ಹೊರಟು ಜೋಗ ಜಲಪಾತಕ್ಕೆ ತೆರಳುವ ವೇಳೆ ಘಟನೆ ನಡೆದಿದ್ದು, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ.
ಘಟನೆಯಲ್ಲಿ ಶಂಭೂರಿನ ಯಶೋಧಾ ಹಾಗೂ ದೀಕ್ಷಿತಾ ಅವರಿಗೆ ಗಂಭೀರ ಗಾಯವಾಗಿದ್ದು, ಉಳಿದಂತೆ ಗಾಯಾಳುಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಬಸ್ಸಿನಲ್ಲಿದ್ದ ಒಂದಷ್ಟು ಮಂದಿಯ ಕೈ-ಕಾಲಿಗೆ ಗಂಭೀರ ಗಾಯವಾಗಿದ್ದು, ಒಂದಿಬ್ಬರು ಮಕ್ಕಳ ತಲೆಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರಿಗೆ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ಬಸ್ಸಿನಲ್ಲಿದ್ದವರು ತಿಳಿಸಿದ್ದಾರೆ.
ಘಟನೆಯ ಕುರಿತು ಬಸ್ಸಿನಲ್ಲಿದ್ದ ಚೈತ್ರೇಶ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾಹಿತಿ ತಿಳಿಸಿದ್ದು, ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಪರಿಷತ್ ಸದಸ್ಯ ಡಾ| ಧನಂಜಯ ಸರ್ಜಿ ಅವರಿಗೆ ಮಾಹಿತಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ. ಜತೆಗೆ ಕಾರ್ಗಲ್ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಹರೀಶ್ ಗೌಡ ಅವರು ಸದಸ್ಯರಾದ ಬಾಲಸುಬ್ರಹ್ಮಣ್ಯ, ಗುರುಸಿದ್ದಪ್ಪ ಅವರ ಜತೆ ಸ್ಥಳಕ್ಕೆ ತೆರಳಿ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.
ಪ್ರವಾಸಿರ ತಂಡ ಮುಂಜಾನೆ 5ರ ಸುಮಾರಿಗೆ ಶಂಭೂರಿನಿಂದ ಹೊರಟು ಪಾಣೆಮಂಗಳೂರು, ಬಿ.ಸಿ.ರೋಡು, ಮಂಗಳೂರಿನಲ್ಲಿ ಪ್ರವಾಸಿಗರನ್ನು ಹತ್ತಿಸಿಕೊಂಡು ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಬಳಿಕ ಜೋಗ ಜಲಪಾತಕ್ಕೆ ತೆರಳುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಎರಡು ತಿಂಗಳ ಹಸುಗೂಸನ್ನೇ ಕೆರೆಗೆ ಎಸೆದ ತಾಯಿ!; ಪ್ರಕರಣ ದಾಖಲು
Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ
Bengaluru: ದೇಶ-ವಿದೇಶಿಗರ ಗಮನ ಸೆಳೆಯುತ್ತಿರುವ ಸಿದ್ದಿ ಕಮ್ಯುನಿಟಿ ಟೂರಿಸಂ!
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.