Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ
Team Udayavani, Oct 10, 2024, 4:24 PM IST
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿ ಕಾರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿಸಿರೋಡಿನ ಭಂಡಾರಿ ಬೆಟ್ಟು ಎಂಬಲ್ಲಿ ಅ.10ರ ಗುರುವಾರ ನಡೆದಿದೆ.
ಸಿದ್ದಕಟ್ಟೆ ನಿವಾಸಿ ರಕ್ಷಿತ್ ಎಂಬವರು ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಮನೆಗೆ ತೆರಳುವ ವೇಳೆ ನಿಯಂತ್ರಣ ಕಳೆದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಕಾರು ಮತ್ತು ಬೈಕ್ ಎರಡೂ ಜಖಂಗೊಂಡಿದೆ. ಕಾರಿನ ಚಾಲಕ ರಕ್ಷಿತ್ ಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.
ಬೈಕ್ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದು ಎಂದು ಹೇಳಲಾಗಿದ್ದು, ಈತನ ಹೆಸರು ವಿಳಾಸದ ಮಾಹಿತಿ ಲಭ್ಯವಾಗಿಲ್ಲ. ಆತ ಕೂಡ ಮಂಗಳೂರಿನಿಂದ ಮತ್ತೆ ವಾಪಸ್ ಚಿಕ್ಕಮಗಳೂರು ಕಡೆಗೆ ತೆರಳುವವನಿದ್ದ. ಬೇರೆ ಕೆಲಸದ ನಿಮಿತ್ತ ಆತ ಬೈಕ್ ರಸ್ತೆ ಪಕ್ಕಕ್ಕೆನಿ ಲ್ಲಿಸಿ ಇಳಿದು ಹೋಗಿದ್ದ. ಹಾಗಾಗಿ ಯಾವುದೇ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.
ಆತ ಬೈಕ್ ನಲ್ಲಿ ಕುಳಿತುಕೊಂಡಿದ್ದರೆ ಜೀವಕ್ಕೆ ಅಪಾಯವಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.