Bantwala: ಮನೆಯಲ್ಲೇ ಕೆಲಸ ಕೊಡಿಸುವುದಾಗಿ 9.20 ಲಕ್ಷ ರೂ. ವಂಚನೆ
Team Udayavani, Jul 9, 2024, 8:56 PM IST
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವ್ಯಕ್ತಿಯೊಬ್ಬರಿಗೆ ಮನೆಯಲ್ಲೇ ಕೆಲಸ (ವರ್ಕ್ ಫ್ರಮ್ ಹೋಮ್) ಕೊಡಿಸುವುದಾಗಿ ಆ್ಯಪ್ ಮೂಲಕ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿ ಒಟ್ಟು 9.20 ಲಕ್ಷ ರೂ. ವಂಚಿಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ವಂಚನೆಗೊಳಗಾದ ವ್ಯಕ್ತಿಯು ವರ್ಕ್ ಪ್ರಮ್ ಹೋಮ್ ಕೆಲಸ ಹುಡುಕುತ್ತಿದ್ದು, ಟೆಲಿಗ್ರಾಂ ಆ್ಯಪ್ ಮೂಲಕ ಕೆಲಸಕ್ಕೆ ಸಂಬಂಧಿಸಿದ ಸಂದೇಶ ಸ್ವೀಕರಿಸಿದ್ದರು. ಕಳೆದ ಎಪ್ರಿಲ್ 11ರಂದು ಅವರನ್ನು ಅಪರಿಚಿತ ವ್ಯಕ್ತಿಯೋರ್ವ ಟೆಲಿಗ್ರಾಂ ಮೂಲಕ ಸಂಪರ್ಕಿಸಿದ್ದು, ಆತನ ಸೂಚನೆಗಳನ್ನು ಪಾಲಿಸುತ್ತಾ ಬಂದಿದ್ದರು.
ಬಳಿಕ ಅಪರಿಚಿತ ವ್ಯಕ್ತಿಯು ಹಂತ ಹಂತವಾಗಿ ಬೇರೆ ಬೇರೆ ಕಾರಣಗಳನ್ನು ನೀಡಿ ಬ್ಯಾಂಕ್ ಖಾತೆಗಳಿಗೆ ಒಟ್ಟು 9.20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುತ್ತಾನೆ ಎಂದು ಪೊಲೀಸರಿಗೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.