ಬಂಟ್ವಾಳ : ಕಮರಿಗೆ ಬಿದ್ದ ಕಾರು, 6 ತಿಂಗಳ ಮಗು ಸೇರಿ ಕಾರಿನಲ್ಲಿದ್ದವರು ಪವಾಡಸದೃಶ ಪಾರು
Team Udayavani, Jul 13, 2022, 3:47 PM IST
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಅಂಚಿ ಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ, ಪೌಜಿಯಾ, ಸೌದ ಮತ್ತು 6 ತಿಂಗಳ ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ತಲೆಕೆಳಗಾಗಿ ಕಾರು ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ 6 ತಿಂಗಳ ಮಗು ಸಹಿತ ಐದು ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಇದನ್ನೂ ಓದಿ : ಹಿಜಾಬ್ ನಿಷೇಧ ವಿವಾದ: ಮುಂದಿನ ವಾರ ಸುಪ್ರೀಂಕೋರ್ಟ್ ನಲ್ಲಿ ಹಿಜಾಬ್ ಅರ್ಜಿ ವಿಚಾರಣೆ
ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ಸಂಬಂಧಿಕರೊರ್ವರು ಹುಷಾರಿಲ್ಲದ ಕಾರಣಕ್ಕಾಗಿ ದಾಖಲಾಗಿದ್ದು ಅವರ ಯೋಗ ಕ್ಷೇಮ ವಿಚಾರಿಸುವ ಸಲುವಾಗಿ ತೆರಳುವ ವೇಳೆ ಈ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಹಲವಾರು ತಿರುವುಗಳನ್ನು ಹೊಂದಿದ್ದು, ಕಳೆದ ಕೆಲ ದಿನಗಳಿಂದ ಸುರಿಯುವ ಮಳೆಗೆ ಹೆದ್ದಾರಿ ಪಕ್ಕದ ಗುಡ್ಡ ಜರಿದು , ರಸ್ತೆಗೆ ಮಣ್ಣು ಬಿದ್ದಿರುವ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು ಅವಘಡ ಸಂಭವಿಸರಬೇಕು ಎನ್ನಲಾಗಿದೆ.
ಸ್ಥಳಕ್ಕೆ ತುರ್ತಾಗಿ ಎಮರ್ಜೆನ್ಸಿ 112 ಪೋಲೀಸ್ ವಾಹನ ತೆರಳಿದ್ದು ಅಲ್ಲಿನ ಗಾಯಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಎಸ್. ಐ.ಮೂರ್ತಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.