Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ
2 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ
Team Udayavani, Sep 7, 2024, 3:16 PM IST
ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ.
ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈಘ ಟನೆ ನಡೆದಿದೆ ಎನ್ನಲಾಗಿದೆ.
ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.