Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
ಬಿ.ಸಿ.ರೋಡಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಹಿಂದೂ ಕಾರ್ಯಕರ್ತರು
Team Udayavani, Sep 16, 2024, 9:02 AM IST
ಬಂಟ್ವಾಳ: ವಿಹಿಂಪ ಮುಂದಾಳು ಶರಣ್ ಪಂಪ್ ವೆಲ್ ಗೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ.
ಇದೀಗ ಶರಣ್ ಪಂಪ್ ವೆಲ್ ಆಗಮಿಸಿದ್ದಾರೆ.
ಈ ವೇಳೆ ಪೊಲೀಸ್ ಸರ್ಪಗಾವಲನ್ನು ಲೆಕ್ಕಿಸದೆ ನುಗ್ಗಿದ ಕಾರ್ಯಕರ್ತರು, ಘಟನೆಯಿಂದ ಹೆದ್ದಾರಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದೆ.
ಈ ಕುರಿತು ಹೇಳಿಕೆ ನೀಡಿದ ಶರಣ್ ಪಂಪ್ ವೆಲ್ ಹಿಂದೂ ಸಂಘಟನೆಗೆ ಇಂತಹ ಸವಾಲು ಹೊಸತೇನಲ್ಲ. ಆದರೆ ಆತನ ಸವಾಲಿಗೆ ಉತ್ತರ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಆತ ಹೇಳಿದಂತೆ ಅವಶ್ಯಕತೆ ಬಿದ್ದರೆ ಮಸೀದಿಗೆ ಹೋಗುವುದಕ್ಕೂ ಸಿದ್ಧರಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ಮೂಲಕ ಹಿಂದುತ್ವದ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ.
ರ್‍ಯಾಲಿ-ಪ್ರತಿ ರ್‍ಯಾಲಿ ನಡೆಸುವ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಾಯ್ಸ್ ಮೆಸೇಜ್ ಮತ್ತು ಚಾಟ್‌ಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ಈಗಾಗಲೇ ನಿಯೋಜಿಸಲಾದೆ ಅಲ್ಲದೆ ಉನ್ನತ ಪೊಲೀಸ್ ಅಧಿಕಾರಿಗಳು ಬಿ.ಸಿ.ರೋಡ್‌ಗೆ ಆಗಮಿಸಿದ್ದಾರೆ.
ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭಾ ಸದಸ್ಯ ಹಸೈನಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.
ಸವಾಲಿನ ಸಂದೇಶ ವೈರಲ್:
ಈದ್ ಮಿಲಾದ್ ರ್‍ಯಾಲಿಯ ಮೇಲೆ ದಾಳಿ ಮಾಡಿದರೆ ಏನಾಗಬಹುದು ಎಂದು ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರು ಸವಾಲು ಹಾಕಿರುವ ವಾಯ್ಸ್ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸೆ. 16ರಂದು ಬಿ.ಸಿ.ರೋಡಿನ ಕೈಕಂಬದಲ್ಲಿ ನಡೆಯುವ ಮಿಲಾದ್ ರ್‍ಯಾಲಿ ಸಂದರ್ಭ ಬಂದು ನಿಲ್ಲುವಂತೆ ಸವಾಲು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಇದು ವೈರಲ್ ಆಗಿದ್ದು, ಈ ಬಗ್ಗೆ ಹಿಂದೂ ನಾಯಕರು, ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಕೋಮು ಸೌಹಾರ್ದ ಹಾಳುಗೆಡುವುವ ಉದ್ದೇಶ ದಿಂದಲೇ ಈ ರೀತಿಯ ಸವಾಲಿನ ಆಡಿಯೋ ಸಂದೇಶ ಹಾಕಲಾಗಿದೆ ಎಂದು ಹಿಂದೂ ಸಂಘಟನೆಗಳು ದೂರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.