BC Road: ಗರ್ಭಿಣಿ ಹಾಗೂ ಬಾಲಕಿಯ ಮೇಲಿನ ಹಲ್ಲೆ ಪ್ರಕರಣ; ರಾಜ್ಯ ಮಹಿಳಾ ಆಯೋಗಕ್ಕೆ ದೂರು


Team Udayavani, Dec 17, 2024, 7:40 AM IST

9

ಬಂಟ್ವಾಳ: ಬಿ.ಸಿ. ರೋಡಿನ ಕೈಕಂಬದ ಪರ್ಲಿಯಾ ಬಳಿ ಮನೆಗೆ ದಾಳಿ ಮಾಡಿ ಗರ್ಭಿಣಿ ಹಾಗೂ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲಿನ ಹಲ್ಲೆ ಪ್ರಕರಣವನ್ನು ರಾಜ್ಯ ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿ ಘಟನ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬುವ ಜತೆಗೆ ಪ್ರಕರಣದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಿ ನಿಷ್ಪಕ್ಷ ತನಿಖೆಗೆ ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ವಿಮೆನ್‌ ಇಂಡಿಯಾ ಮೂವ್‌ಮೆಂಟ್‌ ಸಂಘಟನೆಯು ಬೆಂಗಳೂರಿನಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ| ನಾಗಲಕ್ಷ್ಮೀ ಚೌಧರಿ ಅವರನ್ನು ಭೇಟಿ ಮಾಡಿ ಆಗ್ರಹಿಸಿದೆ.

ಪರ್ಲಿಯಾ ನಿವಾಸಿ ಶಾಹುಲ್‌ ಹಮೀದ್‌ ಅವರ ಮನೆಗೆ ಬಂಟ್ವಾಳದ ರೌಡಿಶೀಟರ್‌ ಹಸೈನಾರ್‌ ಹಾಗೂ 10ಕ್ಕೂ ಅಧಿಕ ಕಿಡಿಗೇಡಿಗಳು ನುಗ್ಗಿ ಗರ್ಭಿಣಿ ಹಾಗೂ ಬಾಲಕಿ ಒಳಗೊಂಡು ಮನೆ ಮಂದಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. ಪ್ರಕರಣದ ಆರೋಪಿಗಳ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ, ಕೊಲೆಯತ್ನ ಸೇರಿದಂತೆ ಗಂಭೀರ ಪ್ರಕರಣಗಳು ದಾಖಲಾದರೂ ಪೊಲೀಸರು ಸಂತ್ರಸ್ತ ದೂರುದಾರರ ಮೇಲೆ ಆರೋಪಿಗಳು ದಾಖಲಿಸಿದ ಸುಳ್ಳು ಪ್ರಕರಣದ ಮೇಲೆ ದೂರುದಾರರನ್ನೇ ಬಂಧಿಸಿದ್ದಾರೆ. ಘಟನೆಯಿಂದ ಮೊದಲೇ ಆತಂಕದಲ್ಲಿರುವ ಸಂತ್ರಸ್ತ ಕುಟುಂಬ ಪ್ರಸ್ತುತ ಯಜಮಾನನ ಬಂಧನದಿಂದ ಇನ್ನಷ್ಟು ಕುಪಿತವಾಗಿದೆ.

ಆರೋಪಿಗಳ ಹಿನ್ನೆಲೆ ಮತ್ತು ಪ್ರಸ್ತುತ ಘಟನೆಯ ಮಾಹಿತಿಯನ್ನು ಕಲೆ ಹಾಕಿ ಎಲ್ಲ ಆರೋಪಿಗಳನ್ನು ಕಾನೂನಿನಡಿ ಬಂಧಿಸಬೇಕು. ಸಂತ್ರಸ್ತ ಕುಟುಂಬದ ಮೇಲೆ ದಾಖಲಾದ ಸುಳ್ಳು ದೂರಿನ ಕುರಿತು ತನಿಖೆಗೆ ಆಯೋಗವು ನಿರ್ದೇಶನ ನೀಡಬೇಕು. ಇಂತಹ ದಾಳಿಗಳು ಮುಂದಿನ ದಿನಗಳಲ್ಲಿ ನಡೆಯದಂತೆ ಮಹಿಳಾ ಆಯೋಗವು ಪೊಲೀಸ್‌ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಮನವಿಗೆ ಸ್ಪಂದಿಸಿದ ಆಯೋಗದ ಅಧ್ಯಕ್ಷರು ಈ ಘಟನೆಯ ಕುರಿತು ವರದಿ ತರಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಸಂಘಟನೆಯ ರಾಜ್ಯ ಸಮಿತಿ ಸದಸ್ಯೆ ಆಯಿಷಾ, ಬೆಂಗಳೂರು ಜಿಲ್ಲಾ ಉಪಾಧ್ಯಕ್ಷೆ ಸುಮಯ್ಯ ಮನವಿ ನೀಡುವ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

1

Puttur: ನಳಿನ್‌ಗೆ ನಿಂದನೆ; ದೂರು ದಾಖಲು

1-asdaaasdasd

Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.