Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು
Team Udayavani, Sep 17, 2024, 9:19 AM IST
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮವನ್ನು ನಿಂದಿಸಿ, ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡುವವರ ಮೇಲೆ ಕಠಿನ ಕಾನೂನು ಕ್ರಮ ನೀಡುವಂತೆ ಮಹಮ್ಮದ್ ರಫೀಕ್ ಕೆಳಗಿನಪೇಟೆ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಸ್ಲಿಂ ಧರ್ಮವನ್ನು ಮತ್ತು ಪುರಸಭೆಯ ಸದಸ್ಯ ಮಹಮ್ಮದ್ ಶರೀಫ್ ಅವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿದ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೆಲ್ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಸೆ.16ರಂದು ಬಿ.ಸಿ.ರೋಡಿನಲ್ಲಿ ಬಜರಂಗ ದಳ- ವಿಹಿಂಪ ಬಿ.ಸಿ.ರೋಡು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ವೆಲ್ ಹಾಗೂ ಭರತ್ ಕುಮ್ಡೆಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ ಧಕ್ಕೆ ಉಂಟಾಗುವಂತೆ ಮತ್ತು ಪ್ರಚೋದನಾಕಾರಿ ಭಾಷಣದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಾಗಾಗಿ ಇವರಿಬ್ಬರ ಮೇಲೆ ಕಾನೂನು ಕ್ರಮ ಜರಗಿಸಿ ಎಂದು ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ದೂರು ದಾಖಲು:
ಶಾಂತಿ ಭಂಗದ ಆರೋಪದಲ್ಲಿ ಯಶೋಧರ ಕರ್ಬೆಟ್ಟು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಎಂಬ ಆರೋಪದ ಮೇಲೆ ಯಶೋಧರ ಕರ್ಬೆಟ್ಟು ಎಂಬವರ ಮೇಲೆ ಕಾನೂನು ಕ್ರಮಜರಗಿಸುವಂತೆ ಬಂಟ್ವಾಳದ ಮಹಮ್ಮದ್ ಸಪ್ನಾಜ್ ನವಾಜ್ ಅವರ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ಪುರಸಭಾ ಸದಸ್ಯ ಮಹಮ್ಮದ್ ಶರೀಫ್ ಅವರ ಮೇಲೆ ಹಾಗೂ ಮುಸ್ಲಿಂ ಧರ್ಮವನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ್ದಾನೆ. ಇದರಿಂದ ಎರಡು ಧರ್ಮಗಳ ನಡುವೆ ದ್ವೇಷ ಉಂಟಾಗಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.