ಬಿ.ಸಿ.ರೋಡ್: ಸಂಚಾರ ಪೊಲೀಸರಿಂದ ಕಾರ್ಯಾಚರಣೆ
Team Udayavani, Apr 24, 2020, 5:47 AM IST
ಬಂಟ್ವಾಳ: ಲಾಕ್‌ಡೌನ್ ಆದೇಶ ಮೀರಿ ಅಗತ್ಯ ವಸ್ತುಗಳ ನೆಪದಲ್ಲಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದವರಿಗೆ ಗುರುವಾರ ಬಿ.ಸಿ. ರೋಡ್‌ನಲ್ಲಿ ಬಂಟ್ವಾಳ ಸಂಚಾರಿ ಪೊಲೀಸರು ಕಾನೂನಿನ ಬಿಸಿ ಮುಟ್ಟಿಸಿದ್ದಾರೆ.
ಗುರುವಾರ ಬೆಳಗ್ಗೆಯೇ ಕಾರ್ಯಾ ಚರಣೆಗಿಳಿದ ಬಂಟ್ವಾಳ ಸಂಚಾರಿ ಠಾಣೆಯ ಪಿಎಸ್‌ಐ ರಾಮ ನಾಯ್ಕ ಹಾಗೂ ಸಿಬಂದಿ ಅನಗತ್ಯ ತಿರುಗಾಟ ನಡೆಸಿದವರಿಗೆ ಎಚ್ಚರಿಕೆ ನೀಡುವ ಜತೆಗೆ ಸಾಕಷ್ಟು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.ಲಾಕ್‌ಡೌನ್ ಆದೇಶದ ಪ್ರಕಾರ ಅಗತ್ಯ ವಸ್ತುಗಳ ಖರೀದಿಯ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಒಬ್ಬರೇ ತೆರಳಬೇಕು. ಆಟೋ ರಿಕ್ಷಾ, ಕಾರುಗಳಲ್ಲಿ ಚಾಲಕ ಹೊರತುಪಡಿಸಿ ಹಿಂಬದಿ ಒಬ್ಬರಿಗೆ ಮಾತ್ರ ಪ್ರಯಾಣಿಸುವುದಕ್ಕೆ ಅವಕಾಶವಿದೆ. ಆದರೆ ಜನತೆ ಅದನ್ನೆಲ್ಲಾ ಗಾಳಿಗೆ ತೂರಿ ತಿರುಗಾಟ ನಡೆಸುತ್ತಿದ್ದರು.
ಪ್ರಸ್ತುತ ಬಂಟ್ವಾಳ ಪೇಟೆ ಸೀಲ್‌ಡೌನ್ ಆಗಿರುವುದರಿಂದ ಬಿ.ಸಿ.ರೋಡ್‌ನಲ್ಲಿ ಜನರ ಓಡಾಟವೂ ಹೆಚ್ಚಾಗಿದೆ. ಹೀಗಾಗಿ ಸಾಮಾಜಿಕ ಅಂತರಕ್ಕೂ ತೊಂದರೆ ಎದುರಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಬಿ.ಸಿ.ರೋಡ್‌ನಲ್ಲಿ ಕಾರ್ಯಾಚರಣೆ ನಡೆಸಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.