ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಸಾವು
ಎಡಮಂಗಲ: ಎಡವಿ ಬಿದ್ದ ವೇಳೆ ನಡೆದ ದುರ್ಘಟನೆ
Team Udayavani, Mar 18, 2023, 5:08 AM IST
ಸುಳ್ಯ: ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತಪಟ್ಟ ದುರ್ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಅವರ ಪತ್ನಿ ಗೀತಾ (37) ಮೃತ ಮಹಿಳೆ. ಮೃತರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಗೀತಾ ಅವರು ಗಂಡನ ಜತೆ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮಾಡುತ್ತ ಹೋಗುವ ವೇಳೆ ಇಳಿಜಾರಿನಲ್ಲಿ ಕಾಲು ಜಾರಿ ಬಿದ್ದಿದ್ದು, ಈ ವೇಳೆ ಕೈಯಲ್ಲಿದ್ದ ಹರಿತವಾದ ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರ ಪತಿ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.