Belthangady: ಯುವಕನ ಮೂಗನ್ನು ಕಚ್ಚಿ ತುಂಡರಿಸಿದ ಪ್ರಕರಣ; ಆರೋಪಿಯ ಸೆರೆ
Team Udayavani, Jan 3, 2024, 12:53 AM IST
ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಕೇಶ್ (21)ನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಈತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು, ಪ್ರಸ್ತುತ ತಾಲೂಕಿನ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ಹೊಸ ವರ್ಷದ ಪಾರ್ಟಿ ವೇಳೆ ಸ್ನೇಹಿತ ದೀಕ್ಷಿತ್ (28)ನ ಮೂಗು ಕಚ್ಚಿ ಗಾಯಗೊಳಿಸಿದ್ದ.
ಘಟನೆಯಿಂದ ಗಾಯಗೊಂಡ ದೀಕ್ಷಿತ್ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ದೀಕ್ಷಿತ್ ನೀಡಿದ ದೂರಿನಂತೆ ಆರೋಪಿ ರಾಕೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ವೇಣೂರು ಉಪನಿರೀಕ್ಷಕ ಶ್ರೀಶೈಲಾ ನೇತೃತ್ವದ ತಂಡ ಜ. 2ರಂದು ಆರೋಪಿ ರಾಕೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.