Belthangady: ಜಾನುವಾರು ಅಕ್ರಮ ಸಾಗಾಟ; ಆರೋಪಿ ಬಂಧನ
Team Udayavani, Aug 14, 2023, 10:15 PM IST
ಬೆಳ್ತಂಗಡಿ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ರವಿವಾರ ಬೆಳಗ್ಗೆ ಚಾರ್ಮಾಡಿ ಪೊಲೀಸ್ ಚೆಕ್ಪೋಸ್ಟ್ ಬಳಿ ಪತ್ತೆ ಹಚ್ಚಲಾಗಿದೆ. ಈ ವೇಳೆ ಪ್ರಮುಖ ಆರೋಪಿ ಪರಾರಿಯಾಗಿದ್ದು, ಚಾಲಕನನ್ನು ಬಂಧಿಸಲಾಗಿದ್ದು, ವಾಹನ ಹಾಗೂ ಮೂರು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದಲ್ಲಿ ಬಂಧಿತ ವ್ಯಕ್ತಿ ಮೂಡಿಗೆರೆ ತಾಲೂಕು ಕೂಡಹಳ್ಳಿ ಗ್ರಾಮದ ಕೆ.ಕೆ. ಪದ್ಮೇಶ್ (41) ಎಂಬಾತನಾಗಿದ್ದು, ಸಾಲೆತ್ತೂರು ನಿವಾಸಿ ಹಮೀದ್ ಪರಾರಿಯಾಗಿದ್ದಾನೆ. ಪೊಲೀಸ್ ಚೆಕ್ಪೋಸ್ಟ್ ಬಳಿ ಕೆಎ. 18 ಸಿ. 2855 ನೊಂದಣಿ ಸಂಖ್ಯೆಯ ವಾಹನ ಅತಿವೇಗದಲ್ಲಿ ಬಂದುದನ್ನು ತಡೆದ ಪೊಲೀಸರು ಯಾವುದೇ ಪರವಾನಿಗೆ ಇಲ್ಲದೆ ಮೂರು ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ಮೂರು ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣ ಕಾಯ್ದೆ-2020 ಮತ್ತು ಕಲಂ: 66 ಜತೆಗೆ 192(ಎ) ಐಎಂವಿಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.