ಬೆಳ್ತಂಗಡಿ: ವಿಷಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನ; ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಸಾವು
Team Udayavani, Mar 24, 2021, 8:23 AM IST
ಬೆಳ್ತಂಗಡಿ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆಳ್ತಂಗಡಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಾ.23 ರಂದು ರಾತ್ರಿ ಸಾವನ್ನಪ್ಪಿದ ಘಟನೆ ನಡೆದಿದೆ.
ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿ ವಿನ್ಸಿ(20) ಎಂಬಾಕೆ ಮಾ.14 ರಂದು ಯಾವುದೋ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ತಕ್ಷಣ ಅವಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಮಾರು 10 ದಿನಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ನಿಧನ
ಬೆಳ್ತಂಗಡಿ ನಗರದ ಕಾಲೇಜೊಂದರ ಅಂತಿಮ ಬಿ. ಕಾಂ. ವಿದ್ಯಾರ್ಥಿನಿಯಾಗಿರುವ ಈಕೆಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.