Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
2010ರಂದು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು
Team Udayavani, Dec 21, 2024, 6:50 AM IST
ಬೆಳ್ತಂಗಡಿ: ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ 2010ರ ಜುಲೈ 30ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡು 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಕಳಿಯ ಗ್ರಾಮದ ಉಬರಡ್ಕ ನಿವಾಸಿ ದಿ. ಕುಂರ್ಬಿಲ ಹಾಗೂ ಲಕ್ಷ್ಮೀ ದಂಪತಿ ಪುತ್ರಿ ಭಾರತಿ (41) ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಅವರು ಅಪಘಾತದ ಬಳಿಕ ಸೊಂಟದ ಸ್ವಾಧೀನ ಕಳೆದುಕೊಂಡು ಮಲಗಿದ್ದಲ್ಲೇ 14 ವರ್ಷ ನರಕಯಾತನೆ ಅನುಭವಿಸಿದ್ದರು. ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.
ಘಟನೆಯ ಹಿನ್ನೆಲೆ:
2010ರ ಜುಲೈ 30ರಂದು ಭಾರೀ ಮಳೆ ಸುರಿಯುತ್ತಿದ್ದ ವೇಳೆ ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯರಾದ ಭಾರತಿ ಹಾಗೂ ಜಯಮಾಲಾ ಕಾಲೇಜು ಬಿಟ್ಟು ಆಟೋದಲ್ಲಿ ಬರುತ್ತಿದ್ದ ಸಂದರ್ಭ ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ ಢಿಕ್ಕಿಯಾಗಿತ್ತು. ಈ ವೇಳೆ ಶಿಕ್ಷಕಿ ಜಯಮಾಲಾ ಸ್ಥಳದಲ್ಲೇ ಮೃತಪಟ್ಟಿದ್ದು ಭಾರತಿ ಗಂಭೀರವಾಗಿ ಗಾಯಗೊಂಡಿದ್ದರು.
ಜಯಮಾಲಾ ಅವರು ಕೆ.ಎ.ಎಸ್. ಪರೀಕ್ಷೆ ಬರೆದಿದ್ದು ಮರಣೋತ್ತರವಾಗಿ ಬಂದ ಫಲಿತಾಂಶದಲ್ಲಿ ಉತ್ತೀರ್ಣರಾಗಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆಲವು ಸಮಯ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆದು ಬಳಿಕ ಮನೆಗೆ ಬಂದಿದ್ದ ಶಿಕ್ಷಕಿ ಭಾರತಿ ಅವರು ಸೊಂಟದ ಸ್ವಾಧೀನ ಕಳೆದುಕೊಂಡ ಪರಿಣಾಮ ಮಲಗಿದ್ದಲ್ಲೆ ಇದ್ದರು. 14 ವರ್ಷ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಂದ ಎಲ್ಲ ನೋವು, ಸವಾಲುಗಳನ್ನು ಎದುರಿಸಿದ್ದರು. ಕಾಲೇಜು ವಿದ್ಯಾರ್ಥಿಗಳ ಜತೆ ಸಂಪರ್ಕದಲ್ಲಿದ್ದು ಅವರಿಗೆ ಅಕೌಂಟೆನ್ಸಿ, ಬ್ಯುಸಿನೆಸ್ ಸ್ಟಡಿ ಹೀಗೇ ಏನೇ ವಿಷಯಗಳಿದ್ದರೂ ಮೊಬೈಲ್ ಮೂಲಕವೇ ಪಾಠ ಹೇಳಿಕೊಡುತ್ತಿದ್ದರು.
ಮೃತರು ತಾಯಿ ಹಾಗೂ ಇಬ್ಬರು ಸಹೋದರ, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.