Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ
Team Udayavani, May 20, 2024, 12:10 AM IST
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮೂಡಲದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರು ಮೇ 18ರಂದು ದಾಳಿ ನಡೆಸಿ ಇಬ್ಬರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ.
ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ (35) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಲಾಗಿದೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾರೆ.
ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಅವರು ಸಿಬಂದಿ ಹಾಗೂ ಪೊಲೀಸ್ ಉಪ ನಿರೀಕ್ಷಕರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದರು. ದಾಳಿ ವೇಳೆ ಸ್ಥಳದಲ್ಲಿ ಕಲ್ಲು, ಹಿಟಾಚಿ-1, ಟ್ರ್ಯಾಕ್ಟರ್-1, ಮದ್ದುಗುಂಡು ಜೀವಂತ 4 ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದೆ ಎನ್ನಲಾಗಿದೆ.
ಸ್ಥಳದಲ್ಲಿದ್ದ ಕಾರ್ಮಿಕರನ್ನು ವಿಚಾರಿಸಿದಾಗ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಅವರು ಗಣಿಗಾರಿಕೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿದ್ದ ಸ್ಫೋಟಕ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಶಾಸಕರ ವಿರುದ್ಧ ದೂರು ದಾಖಲು
ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್ ಪರ ಶಾಸಕ ಹರೀಶ್ ಪೂಂಜ ಹಾಗೂ ಇತರ ಕೆಲವರು ಆರೋಪಿಯನ್ನು ಕಾನೂನು ಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವಾಚ್ಯವಾಗಿ ಬೈದು ಬೆದರಿಸಿರುತ್ತಾರೆ. ಅವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆ ಬಗ್ಗೆ ಅಸಾಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಠಾಣೆಯಲ್ಲಿ ಮಧ್ಯರಾತ್ರಿ ಶಾಸಕ ಪೂಂಜ ಪ್ರತಿಭಟನೆ
ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ವಿನಾಕಾರಣ ಬಂಧಿಸಿದ್ದಾರೆ. ಪೊಲೀಸರ ಕಾಂಗ್ರೆಸ್ ಏಜಂಟರಂತೆ ವರ್ತಿಸಿದ್ದಾರೆ. ಯಾವುದೇ ದಾಖಲೆಯಿಲ್ಲದೆ ಪತ್ನಿ ಮಕ್ಕಳು, ಮನೆಮಂದಿ ಎದುರೇ ರಾತೋರಾತ್ರಿ ಬಂಧಿಸಿ ದರ್ಪ ತೊರಲಾಗಿದೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿ ಶಾಸಕ ಹರೀಶ್ ಪೂಂಜ ಅವರು ಮಧ್ಯರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದರು. ಬೆಳಗ್ಗೆ 5 ಗಂಟೆ ವರೆಗೂ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದ್ದಲ್ಲದೆ, ಪೊಲೀಸರ ಜತೆ ವಾಗ್ವಾದ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.