Belthangady ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ
Team Udayavani, Mar 10, 2024, 12:49 AM IST
ಬೆಳ್ತಂಗಡಿ: ಸುಳ್ಳು ಆರೋಪಗಳನ್ನು ಹೊರಿಸಿ, ಕರ್ತವ್ಯದ ಸಮಯ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ವೇಣೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಿರ್ಲಾಲು ಗ್ರಾಮದ ಬಗ್ಯೋಟ್ಟು ಮನೆಯ ಮಾಧವ ಕುಲಾಲ್ ಶಿರ್ಲಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಜಯ ಲಕ್ಷ್ಮೀ ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಮೇಲಾಧಿಕಾರಿಗಳಿಗೆ ದೂರು ನೀಡುತ್ತಿದ್ದು, ಕೆಲಸಕ್ಕೆ ತೆರಳುವ ಸಮಯ ಆತನ ಆಟೋರಿಕ್ಷಾದಲ್ಲಿ ಹಿಂಬಾಲಿಸುತ್ತ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ.
ಮಾ. 5ರಂದು ಪಲ್ಸ್ ಪೋಲಿಯೋ ಬಗ್ಗೆ ಗ್ರಾಮದಲ್ಲಿ ಮನೆ ಭೇಟಿ ವೇಳೆ ಅಂಗನವಾಡಿ ಕಾರ್ಯಕರ್ತೆ ಜತೆ ಮಾಧವ ಕುಲಾಲ್ ಮನೆಗೆ ತೆರಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೇ, ಮಾನಕ್ಕೆ ಕುಂದುಂಟು ಮಾಡಿ, ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಪೊಲೀಸ್ ಮೇಲೆ ಹಲ್ಲೆಗೆ ಯತ್ನ, ಐವರ ಸೆರೆ
ಬೆಳ್ತಂಗಡಿ: ಇಲ್ಲಿನ ತೆಂಕ ಕಾರಂದೂರು ಗ್ರಾಮದ ಪೆರಾಲ್ದ ಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ದಾಂಧಲೆ ನಡೆಸುತ್ತಿದ್ದವರನ್ನು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಈ ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಳ್ತಂಗಡಿಯ ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.
ಠಾಣೆಯ ಎ.ಎಸ್.ಐ. ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದರು.
ಯುವಕರು ಸೋಡಾ ಬಾಟಲಿಗಳನ್ನು ಒಡೆದು ಹಾಕಿರುವುದನ್ನು ರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟುಗೊಂಡ ಆ ತಂಡ ಅವರ ಮೇಲೆ ದಾಳಿ ನಡೆಸಿದ್ದಲ್ಲದೇ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರಾಮಯ್ಯ ಅವರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳ್ತಂಗಡಿ: ವಿದ್ಯಾರ್ಥಿ ಆತ್ಮಹತ್ಯೆ
ಬೆಳ್ತಂಗಡಿ: ಮುಳಿಕ್ಕಾರು ನಿವಾಸಿ, ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ವಿಘ್ನೇಶ್ (19) ಮಾ.9ರಂದು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಹಿಂದಿನ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ
Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.