Belthangady: ಡಿವೈಡರ್ ಗೆ ಬೈಕ್ ಢಿಕ್ಕಿ; ಸವಾರ ಸಾ*ವು
Team Udayavani, Oct 11, 2024, 1:02 AM IST
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್‌ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಮೃತಪಟ್ಟ ಬೈಕ್ ಸವಾರ. ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಅವರು ಪೈಂಟಿಂಗ್ ವೃತ್ತಿ ನಡೆಸುತ್ತಿದ್ದು, ಗುರುವಾರ ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯಾಗಿದೆ.
ತಲೆಗೆ ಪೆಟ್ಟು ತಗಲಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.