Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Team Udayavani, Dec 26, 2024, 7:15 AM IST
ಬೆಳ್ತಂಗಡಿ: ಸರಕಾರಿ ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟವಾಗಿದೆ.
2022ರ ಡಿ. 20ರಂದು ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ್ ಅವರು ತನ್ನ ಬೈಕ್ನಲ್ಲಿ ಉಜಿರೆ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕು ಲಾೖಲ ಗ್ರಾಮದ ಕಕ್ಕೇನಾ ಎಂಬಲ್ಲಿ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾಗಿ ವಿಜಯ್ ಅವರಿಗೆ ಗಂಭೀರ ಗಾಯವಾಗಿತ್ತು. ವಿಜಯ್ ಅವರ ತಲೆಗೆ, ಮುಖಕ್ಕೆ, ತೀವ್ರ ಗಾಯವಾಗಿದ್ದರಿಂದ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವಾಗಲೇ ದಾರಿ ಮಧ್ಯೆ ಮೃತಪಟ್ಟಿದ್ದರು.
ಸಹಸವಾರ ಶೈಲೇಶ್ ಅವರ ಬಲಕಾಲಿನ ತೊಡೆಗೆ ಗುದ್ದಿದ ಗಾಯವಾಗಿದ್ದು, ಉಜಿರೆ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿದ್ದರು. ಈ ಬಗ್ಗೆ ಶೈಲೇಶ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಆರೋಪಿ ಬಸ್ ಚಾಲಕ ಧಾರವಾಡದ ಅಶೋಕ ಭೋಸಲೆ (59) ಅವರಿಗೆ ಶಿಕ್ಷೆ ಪ್ರಕಟವಾಗಿದೆ.
ಪ್ರಕರಣದಲ್ಲಿ ವಿಚಾರಣೆ ನಡೆಸಿದ ಬೆಳ್ತಂಗಡಿ ಪ್ರಾಂಶುಪಾಲ ಸಿ.ಜೆ. ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಸಂದೇಶ ಕೆ. ಅವರು ಪ್ರಕರಣದಲ್ಲಿ ಬಸ್ ಚಾಲಕ ಅಶೋಕ್ ಅವರ ಮೇಲಿನ ಆರೋಪ ಸಾಬೀತಾಗಿರುವುದರಿಂದ ಡಿ. 23ರಂದು ಒಂದು ತಿಂಗಳು ಜೈಲು ಮತ್ತು 1,500 ರೂ. ದಂಡ ವಿಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಶಿವಕುಮಾರ ಬಿ. ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಸರಕಾರದ ಪರ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಆಶಿತಾ ಎಂ.ಎ. ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.