Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Team Udayavani, Dec 26, 2024, 7:30 AM IST
ಬೆಳ್ತಂಗಡಿ: ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್ಬುಕ್ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿಯಬಿಟ್ಟಿದ್ದು ಜೈನ ಧರ್ಮಕ್ಕೆ ಧಕ್ಕೆಯನ್ನು ಉಂಟು ಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ. 24ರಂದು ಪ್ರಕರಣ ದಾಖಲಾಗಿದೆ.
ಕಲ್ಮಂಜ ನಿವಾಸಿ ಪಣಿರಾಜ್ ಅವರ ದೂರಿನಂತೆ ಡಿ. 20ರಂದು ನಾರಾವಿ ಗ್ರಾಮದ ವಿಜಯಾ ನಾರಾವಿ ಎಂಬಾಕೆ ಜೈನ ಧರ್ಮೀಯರ ಆರಾಧ್ಯ ದೇವರಾದ ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್ಬುಕ್ ಖಾತೆ ಹಾಗೂ ವಾಟ್ಸಫ್ ಮೂಲಕ ಫೋಟೋವನ್ನು ಹರಿಯಬಿಟ್ಟಿರುತ್ತಾರೆ. ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮೀಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ. ಇದರಿಂದ ಜೈನ ಧರ್ಮೀಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.