Belthangady ಕರಿಮಣಿ ಸರ ಕಳ್ಳತನ: ಇಬ್ಬರ ಬಂಧನ
Team Udayavani, Dec 21, 2023, 12:34 AM IST
ಬೆಳ್ತಂಗಡಿ: ಉದ್ಯೋಗಿಯೊಬ್ಬರು ಸರಕಾರಿ ಬಸ್‌ಗೆ ಹತ್ತುವಾಗ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ರಾಜ್ಯದ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರಕಾರಿ ಉದ್ಯೋಗಿಯಾಗಿರುವ ವಾರಿಜಾ ಅವರು ಡಿ. 12ರಂದು ಸರಕಾರಿ ಬಸ್ ಹತ್ತುವ ವೇಳೆ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
ಈ ಪ್ರಕರಣದ ತನಿಖೆ ನಡೆಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ತಮಿಳುನಾಡು ರಾಜ್ಯದ ತಿರುಪುರ್ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30)ರನ್ನು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಡಿ. 20ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಪೊಲೀಸರಿಗೆ ನೀಡಿದ್ದಾರೆ.
ಆರೋಪಿಗಳ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ಪ್ರಕರಣ ದಾಖಲಾಗಿದ್ದು. ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇಬ್ಬರು ಆರೋಪಿಗಳನ್ನು ಸಂಜೆ ನ್ಯಾಯಾಧೀಶರ ಬಳಿ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ಉಪನಿರೀಕ್ಷಕ ಚಂದ್ರಶೇಖರ್ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.