Belthangady ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಮೃತ್ಯು
Team Udayavani, Feb 14, 2024, 12:11 AM IST
ಬಂಟ್ವಾಳ ಬೆಳ್ತಂಗಡಿಯಲ್ಲಿ ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಅನಾರೋಗ್ಯದಿಂದ ಬಂಟ್ವಾಳದಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಬೆಳ್ತಂಗಡಿ ಲಾೖಲ ನಿವಾಸಿ ಕೆ.ಎಲ್. ವಿಶ್ವನಾಥ ರಾವ್ (42) ಮೃತಪಟ್ಟವರು. ಮೂಲತಃ ಬೇಲೂರಿನವರಾದ ಅವರು 20 ವರ್ಷಗಳಿಂದ ಪರವಾನಿಗೆ ಹೊಂದಿದ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅವರಿಗೆ ಮಂಗಳವಾರ ಬೆಳಗ್ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಬಳಿಕ ತತ್‌ಕ್ಷಣ ಲಾೖಲ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗು ವಂತೆ ಸಲಹೆ ನೀಡಿದ್ದು, ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಅವರು ಬಂಟ್ವಾಳ ತಲುಪುತ್ತಿದ್ದಂತೆ ಮೃತ ಪಟ್ಟರು. ಬಳಿಕ ಬಂಟ್ವಾಳ ಆಸ್ಪತ್ರೆಯಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಲೋಬಿಪಿಯಾಗಿರುವ ಕುರಿತು ಸಂಶಯಿಸಲಾಗಿದೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.