Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Team Udayavani, Dec 28, 2024, 2:46 PM IST
ಬೆಳ್ತಂಗಡಿ: ಸರಕಾರಿ ಶಾಲೆಯ ಮಕ್ಕಳು ಶ್ರಮಿಸಿ, ಬೆಳೆಸಿದ ಹೂ ಗಿಡಗಳ ಕುಂಡಗಳನ್ನು ಪುಡಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪೆರೊಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ನಿನ್ನೆ (ಡಿ. 27ರ ಶುಕ್ರವಾರ) ಮಾಜಿ ಪ್ರಧಾನಿ ನಿಧನರಾದ ಬಗ್ಗೆ ಸರಕಾರಿ ರಜೆಯಿದ್ದ ಕಾರಣ, ಇಂದು (ಡಿ.28ರ ಶನಿವಾರ) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಶಾಲಾ ಮಕ್ಕಳು ನೆಟ್ಟು ಬೆಳಿಸಿದ ಹೂ ತೋಟವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಾರೆ.
ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಪಕ್ಕದಲ್ಲೇ ಇರುವ ಈ ಸುಂದರ ಶಾಲೆಗೆ ಶಿಕ್ಷಕರು, ಮಕ್ಕಳು, ಅಭಿವೃದ್ಧಿ ಸಮಿತಿಯವರು, ಹಳೇ ವಿದ್ಯಾರ್ಥಿಗಳ ಸಂಘದವರು, ಊರ ವಿದ್ಯಾಭಿಮಾನಿಗಳು, ಈ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಿರುತ್ತಾರೆ.
ಸರಕಾರಿ ಶಾಲೆಗೆ ತೊಂದರೆ:
ಸರಕಾರಿ ಶಾಲೆಗೆ ಇಂತಹ ನೀಚ ಕೆಲಸ ಮಾಡುವುದರಿಂದ ಕಿಡಿಗೇಡಿಗಳಿಗೆ ಏನು ಲಾಭ. ಇಲ್ಲಿ ಮಕ್ಕಳು ತರಕಾರಿ ಗಿಡ, ಹಣ್ಣಿನ ಗಿಡಗಳನ್ನು ಕೂಡ ಬೆಳೆಸಿದ್ದಾರೆ. ಅದರ ಮೇಲೂ ಕಿಡಿಗೇಡಿಗಳ ಕಣ್ಣು ಬೀಳುವ ಸಾಧ್ಯತೆ ಇದೆ ಎಂಬ ಭಯದಿಂದ ಶಾಲಾ ಶಿಕ್ಷಕ ವೃಂದ ನಮಗೆ ರಕ್ಷಣೆ ಬೇಕು ಎಂದಿದ್ದಾರೆ.
ಈ ಬಗ್ಗೆ ವೇಣೂರು ಪೊಲೀಸ್ ಠಾಣೆ ಗೆ ದೂರು ನೀಡಲಾಗಿದ್ದು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.