ಶಾಸಕ ಹರೀಶ್ ಪೂಂಜ ಬಂಧನ ಹೈಡ್ರಾಮ: ಪೊಲೀಸರ ಮೇಲೆ ರಾಜಕೀಯ ಒತ್ತಡ ಆರೋಪ


Team Udayavani, May 22, 2024, 4:47 PM IST

17

ಬೆಳ್ತಂಗಡಿ: ಶಾಸಕರೊಬ್ಬರ ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕು ಹೈಡ್ರಾಮ ಕ್ಷೇತ್ರವಾಗಿ ಮಾರ್ಪಟ್ಟಿದೆ.

ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಬಂಧನಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಪೊಲೀಸರ ನಡುವೆ ಉಂಟಾದ ಮಾತಿನ ಚಕಮಕಿ ಹಾಗೂ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾದ ಎರಡು ಪ್ರಕರಣಗಳ ವಿಚಾರವಾಗಿ ಮುಂಜಾನೆಯಿಂದ ಸಂಜೆವರೆಗೆ ಬಂಧನ ಪ್ರಹಸನ ಏರ್ಪಟ್ಟಿದೆ.

ಮೇ 21 ರಂದು ಸಂಜೆ ಪ್ರಕರಣ ದಾಖಲಿಸಿದ ಪೊಲೀಸರು, ಮೇ 22 ರಂದು ಮುಂಜಾನೆ ಬೆಳಗ್ಗೆ ನೋಟಿಸ್ ಜಾರಿ ಮಾಡದೆ ಶಾಸಕರ ಮನೆಗೆ ಪೊಲೀಸರು ಆಗಮಿಸಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದು ಶಾಸಕರ ಪರ ವಕೀಲರು ಹಾಗೂ ಜಿಲ್ಲೆಯ ಶಾಸಕರು, ಮುಖಂಡರು, ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರು.

ಪೊಲೀಸರು ಹಾಗೂ ನ್ಯಾಯವಾದಿಗಳ ನಡುವೆ ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಲಾಗಿದೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗಿರುವ ಸಾಧ್ಯತೆ ಕುರಿತು ಕಾರ್ಯಕರ್ತರು ಆಕ್ರೋಶ ಹೊರ ಹಾಕಿ ಶಾಸಕರ ಮನೆಮುಂದೆ ಘೋಷಣೆ ಕೂಗಿದರು.

ಶಾಸಕರನ್ನು ಬಂಧಿಸಿಯೇ ಸಿದ್ದ ಎಂಬಂತೆ ನಾಲ್ಕು ಕೆ.ಎಸ್.ಆರ್.ಪಿ. ತಯಕಡಿಯನ್ನು ಗರ್ಡಾಡಿ ಪ್ರದೇಶದಲ್ಲಿ ಇರಿಸಲಾಗಿದೆ. ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ಎಸ್.ಐ., ವೃತ್ತ ನಿರೀಕ್ಷಕರನ್ನು ನಿಯೋಜಿಸಲಾಗಿದೆ. ಸ್ಥಳಕ್ಕೆ ದ.ಕ.ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಆಗಮಿಸುತ್ತಿದ್ದಾರೆ.

ಬಂಧನಕ್ಕೆ ಎಲ್ಲ ರೀತಿಯ ಸಿದ್ಧತೆ ಕೈಗೊಂಡಿದ್ದು, ಬಂಧನ ವಾರಂಟ್ ಇಲ್ಲದೆ ಬಂದ ಪೊಲೀಸರು ಇದೀಗ ಬಂಧನಕ್ಕೆ ಪೂರಕ ದಾಖಲೆ ಸಿದ್ಧಪಡಿಸಲು ಮುಂದಾಗಿದ್ದಾರೆ.

ಇತ್ತ ಶಾಸಕರ ಮನೆಯಲ್ಲಿ ಕ್ಯಾ. ಬ್ರಿಜೇಶ್ ಚೌಟ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್,ರಾಜೇಶ್ ನಾಯ್ಕ್,  ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಪ್ರತಾಪಸಿಂಹ ನಾಯಕ್, ಗಣೇಶ್ ಕಾರ್ಣಿಕ್,  ಶ್ರೀನಿವಾಸ ಪುಟಾಣಿ, ಪ್ರಸಾದ್ ಕುಮಾರ್, ಕುಶಾಲಪ್ಪ ಗೌಡ ಸ್ಥಳದಲ್ಲಿ ಹಾಜರಿದ್ದಾರೆ.

ವಕೀಲರಾದ ಶಂಭು ಶರ್ಮ ಮಂಗಳೂರು, ಸುಬ್ರಹ್ಮಣ್ಯ ಕುಮಾರ್ ಅಗರ್ತ, ಅನಿಲ್ ಕುಮಾರ್ ವಾದವಿವಾದದಲ್ಲಿ ತೊಡಗಿದ್ದಾರೆ.

ಒಟ್ಟಾರೆಯಾಗಿ ರಾಜ್ಯ ರಾಜಕರಣದಲ್ಲಿ ಓರ್ವ ಶಾಸಕನನ್ನು ಬಂಧಿಸಲು ಮುಂದಾಗುವ ಮೂಲಕ ಹೈಡ್ರಾಮ ಕ್ಷೇತ್ರವಾಗಿ ಬೆಳ್ತಂಗಡಿ ಗೋಚರಿಸಿದೆ.

ಟಾಪ್ ನ್ಯೂಸ್

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.