Belthangady : ವಾಹನ ಸಹಿತ 4.84 ಲಕ್ಷ ರೂ. ಮದ್ಯ ವಶ
Team Udayavani, Apr 12, 2023, 5:09 AM IST
ಸಾಂದರ್ಭಿಕ ಚಿತ್ರ.
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಓಡಿಲ್ಲಾಳದ ರತ್ನಾಕರ ಎಂಬಾತ ಬೆಳ್ತಂಗಡಿ ಕಸಬದ ಕೆಲ್ಲಗುತ್ತು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.
ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಕಾರ್ಯಾಚರಣೆ ನಡೆದಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಒಟ್ಟು 17,280ಲೀ. ಮದ್ಯ ವಶಪಡಿಸಿಕೊಳ್ಳಲಾಗಿದೆ. ಪರಾರಿಯಾದ ಆರೋಪಿಯ ವಿರುದ್ಧ ದೂರು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯ ವಶಕ್ಕೆ ಪಡೆಯಲಾಗಿದ್ದು ಒಟ್ಟು ಮೌಲ್ಯ 3,31,720 ರೂ. ಬೆಳ್ತಂಗಡಿ ಅಬಕಾರಿ ಉಪ ನಿರೀಕ್ಷಕ ಸಯ್ಯದ್ ಶಬೀರ್‌ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ನೀರಚಿಲುಮೆ ಬಳಿ ಮದ್ಯ ವಶ
ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್‌ಎಂಬಾತ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 8,640 ಲೀಟರ್‌ಮದ್ಯ ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಆರೋಪಿಯ ವಿರುದ್ಧ ದೂರು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರಕಾರದ ವಶಕ್ಕೆ ಪಡೆಯಲಾಗಿದ್ದು, ಸೊತ್ತಿನ ಒಟ್ಟು ಮೌಲ್ಯ ಸುಮಾರು 1,53,360 ರೂ. ಆಗಿದೆ. ಅಬಕಾರಿ ಉಪನಿರೀಕ್ಷಕರಾದ ನವೀನ್ ಕುಮಾರ್‌ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.