Bettampady; ರಸ್ತೆ ಬದಿಗೆ ವಾಲಿದ ಶಾಲಾ ಗೋಡೆ!

ಬೆಟ್ಟಂಪಾಡಿ ಶಾಲೆ ಕಟ್ಟಡ ಅಪಾಯದಲ್ಲಿ; ಮಕ್ಕಳು ಸ್ಥಳಾಂತರ

Team Udayavani, Sep 6, 2024, 7:56 AM IST

Bettampady; School wall leaning to the side of the road!

ಬೆಟ್ಟಂಪಾಡಿ: ಕಡಬ ತಾಲೂಕಿನ ಕುಂತೂರು ಸರಕಾರಿ ಶಾಲೆಯ ಕಟ್ಟಡ ಕುಸಿತದ ನೆನಪು ಹಸಿರಾಗಿರುವಾಗಲೇ ಬೆಟ್ಟಂಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಅಪಾಯದ ಕರೆಗಂಟೆ ಬಾರಿಸುತ್ತಿದೆ. ಇಲ್ಲಿನ ಕಟ್ಟಡದ ಗೋಡೆ ರಸ್ತೆ ಬದಿಗೆ ವಾಲಿ ನಿಂತಿದ್ದು, ಯಾವುದೇ ಕ್ಷಣದಲ್ಲಿ ಕುಸಿಯುವ ಅಪಾಯ ಕಂಡುಬರುತ್ತಿದೆ.

ಶಾಲಾ ಕಟ್ಟಡ ಶಿಥಿಲವಾಗಿದ್ದು, ಇದರ 20 ಮೀಟರ್‌ ಉದ್ದ,  10 ಮೀಟರ್‌ಎತ್ತರದ ಕೆಂಪುಕಲ್ಲಿನ ಗೋಡೆ ರಸ್ತೆಯ ಬದಿಗೆ ವಾಲಿ ನಿಂತಿದೆ. ಅಡಿಪಾಯ ಕಟ್ಟಿ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಇಲ್ಲೇ ಚುನಾವಣಾ ಬೂತ್‌ ಇರುವುದರಿಂದ ಇತ್ತೀಚೆಗೆ  ಛಾವಣಿ ದುರಸ್ತಿ ಮಾಡಲಾಗಿತ್ತು. ಈಗ ಎರಡು ಗೋಡೆ ಸಂಧಿಸುವ ಜಾಗ ಬಿರುಕು ಬಿಟ್ಟಿದ್ದು ಪ್ರತಿ ನಿತ್ಯ ಅಂತರ ಹೆಚ್ಚುತ್ತಿದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕಟ್ಟಡದ ಪಕ್ಕದಲ್ಲೇ ಅಂಗನವಾಡಿ ಇದ್ದು ಅದರ ಕಡೆಗೇ ಗೋಡೆ ವಾಲಿದೆ. ಕಟ್ಟಡದ ಪಕ್ಕದ ರಸ್ತೆಯಲ್ಲಿ ನೂರಾರು ಮಂದಿ ಓಡಾಡುತ್ತಾರೆ. ಅವರಿಗೆಲ್ಲ ಕಟ್ಟಡ ಯಾವಾಗ ಬೀಳುತ್ತದೋ ಎಂಬ ಆತಂಕ  ಉಂಟಾಗಿದೆ.

ಮಕ್ಕಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್
ಈ ಕಟ್ಟಡದಲ್ಲಿರುವ ಮತ್ತು ಅಂಗನವಾಡಿಯ ಮಕ್ಕಳನ್ನು ಶಾಲೆಯ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ್‌, ಸಹಾಯಕ ವಿಜಯ್‌ ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಮನವಿ
ಶಾಲೆಯ ಸ್ಥಿತಿ ಬಗ್ಗೆ  ಪುತ್ತೂರು ಸಹಾಯಕ ಆಯುಕ್ತರಿಗೆ ಫೋನ್‌ ಮೂಲಕ ಮಾಹಿತಿಗಳನ್ನು ನೀಡಲಾಗಿದೆ. ಚಿತ್ರಗಳನ್ನು ಕಳಿಸಲಾಗಿದೆ.  ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಾಶ್ವತ ಪರಿಹಾರಕ್ಕೆ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ತಿಳಿಸಿದ್ದಾರೆ.

-ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.